ರಾಜ್ಯ

ಬೆಂಗಳೂರಿನಲ್ಲಿ 2 ಒಮಿಕ್ರಾನ್, ರಾಜ್ಯದಲ್ಲಿಂದು 363 ಕೊರೋನಾ ಪ್ರಕರಣ ಪತ್ತೆ; 191 ಚೇತರಿಕೆ, 3 ಸಾವು

Nagaraja AB

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 363 ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,96,833ಕ್ಕೆ ಏರಿಕೆಯಾಗಿದೆ. 191 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 6,743 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕೊರೋನಾದಿಂದ ಮೂವರು ಇಂದು ಮೃತಪಟ್ಟಿದ್ದು, ಮೃತರ ಒಟ್ಟು ಸಂಖ್ಯೆ 38,216ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 34 ರಷ್ಟಿದ್ದು, ಮರಣ ಪ್ರಮಾಣ ಶೇ. 0.82 ರಷ್ಚಿದೆ. ಬೆಂಗಳೂರು ನಗರದಲ್ಲಿ 206 ಹೊಸ ಪ್ರಕರಣ ಪತ್ತೆಯಾಗಿದ್ದು, 105 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಬೀದರ್, ಚಿಕ್ಕಬಳ್ಳಾಪುರ, ಗದಗ್, ರಾಯಚೂರು, ರಾಮನಗರ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.  

SCROLL FOR NEXT