ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಸಂಖ್ಯೆಯಲ್ಲಿ ಗಣನೀಯ ಏರಿಕೆ: ಬೆಂಗಳೂರಿನಲ್ಲಿ 212, ರಾಜ್ಯದಲ್ಲಿ 413 ಪ್ರಕರಣ ಪತ್ತೆ: 4 ಸಾವು

ರಾಜ್ಯದಲ್ಲಿ ಮಾರಕ ಕೋವಿಡ್ ಸಾಂಕ್ರಾಮಿಕ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 413 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 

ಬೆಂಗಳೂರು: ರಾಜ್ಯದಲ್ಲಿ ಮಾರಕ ಕೋವಿಡ್ ಸಾಂಕ್ರಾಮಿಕ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 413 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಪತ್ತೆಯಾಗಿರುವ ಹೊಸ ಸೋಂಕು ಪ್ರಕರಣಗಳ ಮೂಲಕ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 29,97,246ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು ಕೋರೋನಾದಿಂದಾಗಿ 4  ಸೋಂಕಿತರು ಸಾವನ್ನಪ್ಪಿದ್ದು, ಕೋವಿಡ್ ಗೆ ಬಲಿಯಾದವರ ಸಂಖ್ಯೆ 38,220 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 256 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಸಂಖ್ಯೆ 29,52,101ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 6,896ಕ್ಕೆ ಕುಸಿದಿದೆ. 

ರಾಜಧಾನಿ ಬೆಂಗಳೂರಿನಲ್ಲಿ ಇಂದು 212 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಎರಡು ಸಾವು ವರದಿಯಾಗಿದೆ. ಬೆಂಗಳೂರಿನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 12,57,035ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 16,342ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 185  ಮಂದಿ ಸೋಂಕಿತರು ಗುಣಮುಖರಾಗಿದ್ದು, ನಗರದಲ್ಲಿ ಒಟ್ಟಾರೆ ಗುಣಮುಖರ ಪ್ರಮಾಣ 12,35,643ಕ್ಕೆ ಏರಿಕೆಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

Main Tera Hero: ರಿರಿಲೀಸ್; ಗರ್ಲ್ ಫ್ರೆಂಡ್ ಗಾಗಿ ಅಭಿಮಾನಿಯ ಡ್ಯಾನ್ಸ್ , ವಿಡಿಯೋ ವೈರಲ್, ವರುಣ್ ಧವನ್ ಹೇಳಿದ್ದೇನು?

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್ ! JSP ಕಾರ್ಯಕರ್ತರಿಗೆ ಖಡಕ್ ಸೂಚನೆ

SCROLL FOR NEXT