ಅಪಘಾತಕ್ಕೊಳಗಾದ ಈರುಳ್ಳಿ ಕ್ಯಾಂಟರ್ 
ರಾಜ್ಯ

ಚಿತ್ರದುರ್ಗ: ಈರುಳ್ಳಿ ತುಂಬಿ ಕೆಟ್ಟು ನಿಂತಿದ್ದ ಕ್ಯಾಂಟರ್ ಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ; ನಾಲ್ವರ ದುರ್ಮರಣ

ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಕ್ಯಾಂಟರ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ: ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಕ್ಯಾಂಟರ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ದೊಡ್ಡಸಿದ್ದವ್ವನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 40ರಲ್ಲಿ ಗ್ಯಾಸ್ ಟ್ಯಾಂಕರ್, ಈರುಳ್ಳಿ ತುಂಬಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗದಗ ಜಿಲ್ಲೆ ರೋಣದಿಂದ ಬೆಂಗಳೂರಿಗೆ ಈರುಳ್ಳಿ ಸಾಗಿಸುತ್ತಿದ್ದ ಕ್ಯಾಂಟರ್ ಟೈರ್ ಪಂಕ್ಚರ್ ಆದ ಹಿನ್ನೆಲೆಯಲ್ಲಿ ನಾಲ್ವರು ಕ್ಯಾಂಟರ್ ಅನ್ನು ರಸ್ತೆಬದಿ ನಿಲ್ಲಿಸಿ ಟೈರ್ ಬದಲಾಯಿಸುತ್ತಿದ್ದರು.

ಈ ವೇಳೆ ಹಿಂದಿನಿಂದ ಬಂದ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ. ರಾಯಚೂರಿನ ಹುಲುಗಪ್ಪ, ಕುಷ್ಟಗಿಯ ಮಂಜುನಾಥ್, ವಿಜಯಪುರದ ಸಂಜಯ್, ರೋಣದ ಶರಣಪ್ಪ ಮೃತರು. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.   

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT