ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 397 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,97,643ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ನಾಲ್ವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38224ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನು ಓದಿ: ಕೋವಿಡ್ ಕೇಸ್ ಹೆಚ್ಚಳ: ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸೇರಿ ಐದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ
ಬೆಂಗಳೂರಿನಲ್ಲಿ ಇಂದು 207 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,57,242ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ಇದನ್ನು ಓದಿ: ತಪ್ಪಿಸಿಕೊಂಡಿದ್ದ ಎಲ್ಲಾ ದಕ್ಷಿಣ ಆಫ್ರಿಕನ್ನರನ್ನು ಪತ್ತೆ ಮಾಡಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ: ಬಿಬಿಎಂಪಿ
ರಾಜ್ಯದಲ್ಲಿ ಇಂದು 277 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,52,378ಕ್ಕೆ ಏರಿಕೆಯಾಗಿದೆ. ಇನ್ನು 7012 ಸಕ್ರಿಯ ಪ್ರಕರಣಗಳಿವೆ.