ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಹಾಗೂ ಇತರೆ ಸಚಿವರು ಹಾಜರಿರುವುದು. 
ರಾಜ್ಯ

ಬೆಂಗಳೂರು ಸಮಗ್ರ ಅಭಿವೃದ್ಧಿಗೆ 'ವಿಷನ್ ಡಾಕ್ಯುಮೆಂಟ್' ಸಿದ್ಧಪಡಿಸಲಾಗಿದೆ: ಸಿಎಂ ಬೊಮ್ಮಾಯಿ

ಬೆಂಗಳೂರು ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಸಮಗ್ರ ವಿಷನ್ ಡಾಕ್ಯುಮೆಂಟ್ ಸಿದ್ಧಪಡಿಸಿದ್ದು, ಮುಂದಿನ ದಿನಗಳಲ್ಲಿ ಜಾರಿಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು: ಬೆಂಗಳೂರು ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಸಮಗ್ರ ವಿಷನ್ ಡಾಕ್ಯುಮೆಂಟ್ ಸಿದ್ಧಪಡಿಸಿದ್ದು, ಮುಂದಿನ ದಿನಗಳಲ್ಲಿ ಜಾರಿಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ.

ನಗರ ಪೊಲೀಸ್ ಇಲಾಖೆ ಹಾಗೂ ಬಿಬಿಎಂಪಿ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಸರಸ್ವತಿ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಗೋವಿಂದರಾಜ ನಗರ ಪೊಲೀಸ್ ಠಾಣೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳ ಪರಿಶೀಲಿಸಲು ಮತ್ತು ಮಹಿಳೆಯರ ಸುರಕ್ಷತೆಯನ್ನು ಹೆಚ್ಚಿಸಲು 7,000 ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಒಟ್ಟು 195 ಕಿ.ಮೀ ಉದ್ದದ ಹನ್ನೆರಡಕ್ಕೂ ಹೆಚ್ಚಿನ ಸಾಂದ್ರತೆಯ ಕಾರಿಡಾರ್‌ಗಳನ್ನು ಸಿಗ್ನಲ್ ರಹಿತ ರಸ್ತೆಗಳನ್ನಾಗಿ ಮಾಡಲಾಗುವುದು ಎಂದು ಹೇಳಿದರು.

ಪ್ರವಾಹ ತಡೆಯಲು ಸರ್ಕಾರ ಮಾಸ್ಟರ್ ಪ್ಲಾನ್ ಸಿದ್ಧಪಡಿಸುತ್ತಿದ್ದು, ಕೆರೆಗಳ ಅಭಿವೃದ್ಧಿ ಜತೆಗೆ ಮಳೆನೀರು ಚರಂಡಿಗಳ ಪುನರ್‌ನಿರ್ಮಾಣವನ್ನೂ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಬಳಿಕ ರಾಜ್ಯ ಪೊಲೀಸರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ನಾನು ಗೃಹ ಸಚಿವಾಗಿದ್ದಾಗ ಮಾದಕ ವಸ್ತು ಮಾಫಿಯಾ ವಿರುದ್ಧ ಸಮರ ಸಾರುವಂತೆ ಪೊಲೀಸರಿಗೆ ಸೂಚಿಸಿದೆ. ಆಗ ಹಿಂದೆಂದೂ ಕೇಳರಿಯದ ರೀತಿಯಲ್ಲಿ ಮಾದಕ ವಸ್ತು ದಂಧೆ ವಿರುದ್ಧ ಪೊಲೀಸರ ದಾಳಿ ನಡೆಯಿತು. ಎಷ್ಟರ ಮಟ್ಟಿಗೆ ಅಂದರೆ ಡ್ರಗ್ಸ್ ಸಂಬಂಧ ಎರಡು ವರ್ಷದಲ್ಲಿ ಕರ್ನಾಟಕದಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆಯೂ ದೇಶದ ಇತರೆ ರಾಜ್ಯಗಳ ಒಟ್ಟು ಪ್ರಕರಣಗಳಿಗಿಂತ ಹೆಚ್ಚಾಗಿತ್ತು. ಮೊದಲ ಬಾರಿಗೆ ಒಂದೇ ದಿನ ರೂ.50 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಬೆಂಕಿ ಇಟ್ಟು ಸುಡಲಾಯಿತು.

ಒಂದು ಕಾಲದಲ್ಲಿ ಬೆಂಗಳೂರಿನ ಕಾನೂನು ಸುವ್ಯವಸ್ಥೆ ಹೇಗಿತ್ತು ಎಂಬುದನ್ನು ನೆನಪು ಮಾಡಿಕೊಳ್ಳಬೇಕು. ದಿನ ಬೆಳಗಾದರೆ ಬೀದಿಗಳಲ್ಲಿ ಕೊಲೆಗಳಾಗುತ್ತಿದ್ದವು. ಆದರೆ, ಇವತ್ತು ಅಂತಹ ಪರಿಸ್ಥಿತಿ ಇಲ್ಲ. ಕೆಲ ಸಣ್ಣಪುಟ್ಟ ಘಟನೆಗಳ ಹೊರತು ನಗರ ಶಾಂತವಾಗಿದೆ. ಅಂದು ರೌಡಿ ರಾಜ್ಯ ಇತ್ತು. ಈಗ ಕಾನೂನು ಮತ್ತು ಸುವ್ಯವಸ್ಥೆಯ ರಾಜ್ಯ ಇದೆ. ರಾಷ್ಟ್ರಪಟ್ಟದ ಪ್ರತಿಷ್ಠಿತ ನಿಯತಕಾಲಿಕವೊಂದು ಕರ್ನಾಟಕವು ದೇಶದಲ್ಲೇ ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆಯಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಹೇಳಿದೆ ಎಂದು ಶ್ಲಾಘಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT