ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ಸಂಖ್ಯೆಯಲ್ಲಿ ಗಣನೀಯ ಏರಿಕೆ: ಬೆಂಗಳೂರಿನಲ್ಲಿ 256, ರಾಜ್ಯದಲ್ಲಿ 456 ಪ್ರಕರಣ ಪತ್ತೆ: 6 ಸಾವು

ರಾಜ್ಯದಲ್ಲಿ ಮಾರಕ ಕೋವಿಡ್ ಸಾಂಕ್ರಾಮಿಕ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 456 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 

ಬೆಂಗಳೂರು: ರಾಜ್ಯದಲ್ಲಿ ಮಾರಕ ಕೋವಿಡ್ ಸಾಂಕ್ರಾಮಿಕ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 456 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಪತ್ತೆಯಾಗಿರುವ ಹೊಸ ಸೋಂಕು ಪ್ರಕರಣಗಳ ಮೂಲಕ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು ಕೋರೋನಾದಿಂದಾಗಿ 4  ಸೋಂಕಿತರು ಸಾವನ್ನಪ್ಪಿದ್ದು, ಕೋವಿಡ್ ಗೆ ಬಲಿಯಾದವರ ಸಂಖ್ಯೆ 38,230 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 330 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಸಂಖ್ಯೆ 29,52,708ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 7,132ಕ್ಕೆ ಕುಸಿದಿದೆ. 

ರಾಜಧಾನಿ ಬೆಂಗಳೂರಿನಲ್ಲಿ ಇಂದು 256 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಮೂರು ಸಾವು ವರದಿಯಾಗಿದೆ. ಬೆಂಗಳೂರಿನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 12,57,498ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 16,345ಕ್ಕೆ ಏರಿಕೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

'ಯಾವ ಕ್ಷಣದಲ್ಲಾದರೂ ಕುಸಿಯಬಹುದು': Kerala Landslide ಕುರಿತು ಮೊದಲೇ ಎಚ್ಚರಿಕೆ ನೀಡಿದ್ದ ಗುತ್ತಿಗೆದಾರರ ವರದಿ

ರಾಜ್ಯ ಸರ್ಕಾರಕ್ಕೆ ಶಾಶ್ವತ ನಿವಾಸ ಪ್ರಮಾಣ ಪತ್ರ ಕೊಡೋ ಅಧಿಕಾರವೇ ಇಲ್ಲ-ಛಲವಾದಿ ನಾರಾಯಣ ಸ್ವಾಮಿ ಕಿಡಿ!

SIR ಕಂಪ್ಯೂಟರೀಕರಣ, ಚಿಕ್ಕಬಳ್ಳಾಪುರ ಅಪರೂಪದ ಸಾಧನೆ, ರಾಜ್ಯದಲ್ಲೇ ಮೊದಲ ಸ್ಥಾನ!

GBA ಚುನಾವಣೆ‌ ನಡೆಸಲು ಡಿಸೆಂಬರ್‌ವರೆಗೆ ಕಾಲಾವಕಾಶ ಕೊಡಿ: ಸುಪ್ರೀಂ ಕೋರ್ಟ್ ಗೆ ಸರ್ಕಾರದ ಅರ್ಜಿ