ರಾಜ್ಯ

ಚಿಕ್ಕಮಗಳೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಕೊರೋನಾ ಸ್ಫೋಟ: 70 ವಿದ್ಯಾರ್ಥಿಗಳಿಗೆ ಸೋಂಕು

Sumana Upadhyaya

ಚಿಕ್ಕಮಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಧಾರವಾಡ, ಬೆಂಗಳೂರು, ಹಾಸನ ನಂತರ ಇದೀಗ ಚಿಕ್ಕಮಗಳೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಸುಮಾರು 70 ಮಕ್ಕಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಎನ್ ಆರ್ ಪುರ ತಾಲ್ಲೂಕಿನ ಸಿಗೋಡುನಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ ಸೋಂಕು ಕಾಣಿಸಿಕೊಂಡು ಕ್ಲಸ್ಟರ್ ಆಗಿದೆ. ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ವಿದ್ಯಾಲಯದ ಸಿಬ್ಬಂದಿಗಳಿಗೂ ಕೊರೋನಾ ಪಾಸಿಟಿವ್ ಕಂಡುಬಂದಿದ್ದು ಪೋಷಕರಲ್ಲಿ, ಸುತ್ತಮುತ್ತಲ ನಿವಾಸಿಗಳಲ್ಲಿ ಆತಂಕ ತಂದಿದೆ. ಕ್ಲಸ್ಪರ್ ನ್ನಾಗಿ ಆರೋಗ್ಯ ಇಲಾಖೆ ಪರಿವರ್ತಿಸಿ ಕೊರೋನಾ ಮಾರ್ಗಸೂಚಿಗಳನ್ನು ಅನುಸರಿಸಲು ಸೂಚಿಸಲಾಗಿದೆ.

ಚಿಕ್ಕಮಗಳೂರಿನ ಬಾಳೆಹೊನ್ನೂರು ಸಮೀಪದ ಸಿಗೋಡುನಲ್ಲಿರುವ ಜವಾಹರ್ ನವೋದಯ ವಸತಿ ಶಾಲೆಯ ಮೂವರು ವಿದ್ಯಾರ್ಥಿಗಳು ಹಾಗು ನಾಲ್ವರು ಸಿಬ್ಬಂದಿಯಲ್ಲಿ ಮೊದಲು ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ, 418 ವಿದ್ಯಾರ್ಥಿಗಳು, ಸಿಬ್ಬಂದಿಯ ಮಾದರಿಯನ್ನು ಆರೋಗ್ಯ ಇಲಾಖೆ ಪಡೆದಿತ್ತು. ಆ ಪೈಕಿ ಈವರೆಗೆ 70 ಮಂದಿಯಲ್ಲಿ ಕೋವಿಡ್‌ ಪತ್ತೆಯಾಗಿದೆ. ಸದ್ಯ ಈಗ ಜವಾಹರ್ ನವೋದಯ ವಿದ್ಯಾಲಯವನ್ನು ಸೀಲ್‌ಡೌನ್ ಮಾಡಲಾಗಿದೆ.

SCROLL FOR NEXT