ರಾಜ್ಯ

ಐಡಿ ಕಾರ್ಡ್ ತೋರಿಸಿ ಬಸ್'ನಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅವಕಾಶ: ಡಿಸೆಂಬರ್ 15ರವರೆಗೂ ಅವಧಿ ವಿಸ್ತರಣೆ

Manjula VN

ಬೆಂಗಳೂರು: ಐಡಿ ಕಾರ್ಡ್ ತೋರಿಸಿ ಬಸ್ ನಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಿದ್ದ ಅವಧಿಯನ್ನು ಡಿಸೆಂಬರ್ 15ರವರೆಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವಿಸ್ತರಿಸಿದೆ ಎಂದು ತಿಳಿದುಬಂದಿದೆ.

1 ರಿಂದ 10ನೇ ತರಗತಿ, ಪಿಯುಸಿ, ಐಟಿಐ, ಡಿಪ್ಲೋಮಾ, ವೃತ್ತಿಪರ, ಪದವಿ, ಸ್ನಾತಕೋತ್ತರ, ತಾಂತ್ರಿಕ ಮತ್ತು ವೈದ್ಯಕೀಯ ಕಾಲೇಜು, ಸಂಜೆ ಕಾಲೇಜು ಹಾಗೂ ಪಿಹೆಚ್ ಡಿ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಶಾಲಾ , ಕಾಲೇಜಿನ ಶುಲ್ಕ ರಸೀದಿ ಅಥವಾ ಶಾಲಾ ಕಾಲೇಜಿನ ಗುರುತಿನ ಚೀಟಿಯೊಂದಿಗೆ ಡಿಸೆಂಬರ್ 15 ರವರೆಗೆ ಬಿಎಂಟಿಸಿ ಸಾಮಾನ್ಯ ಸೇವೆಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ಈ ನಡುವೆ ಐಡಿ ವಿದ್ಯಾರ್ಥಿಗಳು ಪಾಸ್ ಪಡೆದುಕೊಳ್ಳಲು ಆನ್'ಲೈನ್ ನಲ್ಲಿ ಅರ್ಜಿ ಸಲ್ಲಿಸುವಲ್ಲಿ ಸಮಸ್ಯೆಗಳು ಎದುರಾಗುತ್ತಿವೆ ಎಂದು ತಿಳಿದುಬಂದಿದೆ.

ತಾಂತ್ರಿಕ ಸಮಸ್ಯೆಗಳು ಎದುರಾಗಿರುವ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಶಾಂತಿನಗರದಲ್ಲಿರುವ ಬಿಎಂಟಿಸಿ ಕಚೇರಿಗೆ ತೆರಳುವ ಪರಿಸ್ಥಿತಿ ಎದುರಾಗಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಬಸ್ ಪಾಸ್ ಗಳ ಜೊತೆಗೆ ಆಧಾರ್ ಕಾರ್ಡ್ ಗಳ ಪರಿಶೀಲನೆ ಕೂಡ ಮಾಡಲಾಗುತ್ತಿದ್ದು, ಇದರಿಂದ ಸಮಸ್ಯೆಗಳು ಎದುರಾಗಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

SCROLL FOR NEXT