ಉರಿಮಜಲು ರಾಮ್ ಭಟ್ 
ರಾಜ್ಯ

ಆರ್ ಎಸ್ಎಸ್, ಬಿಜೆಪಿಯ ಹಿರಿಯ ನಾಯಕ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ ನಿಧನ 

ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಬಿಜೆಪಿಯ ಹಿರಿಯ ನಾಯಕ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ (92) ಡಿ.06 ರಂದು ಸಂಜೆ ನಿಧನರಾದರು.

ಮಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಬಿಜೆಪಿಯ ಹಿರಿಯ ನಾಯಕ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ (92) ಡಿ.06 ರಂದು ಸಂಜೆ ನಿಧನರಾದರು.

ವಯೋಸಹಜ ಅನಾರೋಗ್ಯದಿಂದ ರಾಮ್ ಭಟ್ ಅವರು ಒಂದು ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮರಳಿ ಮನೆಗೆ ವಾಪಸ್ಸಾಗಿದ್ದರು.  ಆದರೆ ಇಂದು ಸ್ವಗೃಹದಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರದಿಂದ 7 ಬಾರಿ ಸ್ಪರ್ಧಿಸಿದ್ದ ರಾಮ್ ಭಟ್ ಅವರು 2 ಬಾರಿ ಶಾಸಕರಾಗಿದ್ದರು. 

ಜನಸಂಘದಿಂದ 1957 ರಲ್ಲಿ ಮೊದಲ ಬಾರಿಗೆ ಚುನಾವಣೆಗೆ ರಾಮ್ ಭಟ್ ಸ್ಪರ್ಧಿಸಿದ್ದರು. ಬಿಜೆಪಿ ವಿರುದ್ಧವೂ ಬಂಡಾಯವೆದ್ದಿದ್ದ ರಾಮ್ ಭಟ್ 2009 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ನಳಿನ್ ಕುಮಾರ್ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 

ಈ ಬಳಿಕ ಮೋದಿ ಪ್ರಧಾನಿಯಾದ ನಂತರ ರಾಮ್ ಭಟ್ ಅವರು ಬಿಜೆಪಿಗೆ ಮರಳಿ ಬೆಂಬಲ ಘೋಷಿಸಿದ್ದರು. 2019 ರಲ್ಲಿ ಮೋದಿ ಸ್ವತಃ ಕರೆ ಮಾಡಿ ರಾಮ್ ಭಟ್ ಅವರೊಂದಿಗೆ ಮಾತನಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!