ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಮಗಳೂರು: ನವೋದಯ ಶಾಲೆಯಲ್ಲಿ 35 ಮಂದಿಗೆ ಕೋವಿಡ್ ಪಾಸಿಟಿವ್

 ಚಿಕ್ಕಮಗಳೂರು ಜಿಲ್ಲೆಯ ಸೀಗೊಡುವಿನ ಜವಹರ್ ನವೋದಯ ಶಾಲೆಯಲ್ಲಿ ಶನಿವಾರ 35 ಮಂದಿಗೆ ಕೋವಿಡ್-19 ಸೋಂಕು ಕಾಣಿಸಿಕೊಳ್ಳುವುದರೊಂದಿಗೆ ಸೋಂಕಿತರ ಸಂಖ್ಯೆ 103ಕ್ಕೆ ಏರಿಕೆಯಾಗಿದೆ.

ಶಿವಮೊಗ್ಗ: ಚಿಕ್ಕಮಗಳೂರು ಜಿಲ್ಲೆಯ ಸೀಗೊಡುವಿನ ಜವಹರ್ ನವೋದಯ ಶಾಲೆಯಲ್ಲಿ ಶನಿವಾರ 35 ಮಂದಿಗೆ ಕೋವಿಡ್-19 ಸೋಂಕು ಕಾಣಿಸಿಕೊಳ್ಳುವುದರೊಂದಿಗೆ ಸೋಂಕಿತರ ಸಂಖ್ಯೆ 103ಕ್ಕೆ ಏರಿಕೆಯಾಗಿದೆ. ಪಾಸಿಟಿವ್ ವರದಿಯಾಗಿರುವ ಸೋಂಕಿತರನ್ನು ಪ್ರತ್ಯೇಕ ಬ್ಲಾಕ್ ನಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. 

418 ಸ್ಯಾಂಪಲ್ ಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಶುಕ್ರವಾರ ಮೂವರು ವಿದ್ಯಾರ್ಥಿಗಳು ಹಾಗೂ ನಾಲ್ವರು ಸಿಬ್ಬಂದಿಗೆ ಪಾಸಿಟಿವ್ ಬಂದಿತ್ತು. ತದನಂತರ ಶನಿವಾರ 61 ಪಾಸಿಟಿವ್ ಪ್ರಕರಣ ವರದಿಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್. ಎನ್. ಉಮೇಶ್ ತಿಳಿಸಿದ್ದಾರೆ.

ಭಾನುವಾರ ಕೂಡಾ 35 ಪ್ರಕರಣಗಳು ವರದಿಯಾಗಿವೆ. ಆದ್ದರಿಂದ ಇಲ್ಲಿಯವರೆಗೂ 92 ವಿದ್ಯಾರ್ಥಿಗಳು, 11 ಸಿಬ್ಬಂದಿ ಸೇರಿದಂತೆ 103 ಮಂದಿಗೆ ಸೋಂಕು ತಗುಲಿದ್ದು, ಎಲ್ಲರೂ ರೋಗ ಲಕ್ಷಣರಹಿತರಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಶಾಲೆಯನ್ನು ಮುಚ್ಚಲಾಗಿದ್ದು, ತರಗತಿ ನಡೆಯುತ್ತಿಲ್ಲ. ಶಾಲೆಯನ್ನು ಕಂಟೈನ್ ಮೆಂಟ್ ವಲಯ ಎಂದು ಘೋಷಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ತಮಿಳುನಾಡು ಸರ್ಕಾರದಿಂದ ಮತ್ತೊಂದು ಮಹತ್ವದ ಘೋಷಣೆ: ಸಣ್ಣ ರೈತರ ₹50,000 ವರೆಗಿನೆ ಬೆಳೆ ಸಾಲ ಮನ್ನಾ!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

SCROLL FOR NEXT