ಸಾಂದರ್ಭಿಕ ಚಿತ್ರ 
ರಾಜ್ಯ

ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್ ಅಭ್ಯರ್ಥಿ ಮತ್ತು ಶಾಸಕನ ವಿರುದ್ಧ ಎಫ್​ಐಆರ್

ಬಂಗಾರಪೇಟೆಯ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ ವಿರುದ್ಧ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಎಫ್​ಐಆರ್​ ದಾಖಲಾಗಿದೆ.  ನವೆಂಬರ್ 29 ರಂದು ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಬೆಂಗಳೂರು: ರಾಜ್ಯ ವಿಧಾನ ಪರಿಷತ್​ನ 25 ಕ್ಷೇತ್ರಗಳಿಗೆ ಡಿ. 10ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದೆ. ಈ ನಡುವೆ ಬಂಗಾರಪೇಟೆಯ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ ವಿರುದ್ಧ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಎಫ್​ಐಆರ್​ ದಾಖಲಾಗಿದೆ. ನವೆಂಬರ್ 29 ರಂದು ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಯೂಸೂಫ್ ಷರೀಫ್ ವಿರುದ್ಧ ಎರಡು ಎಫ್ ಐ ಆರ್ ದಾಖಲಾಗಿವೆ, ನವೆಂಬರ್ 30 ರಂದು ಪ್ರಚೋದನಾಕಾರಿ ಭಾಷಣ ನಡೆಸಿದ ಹಿನ್ನೆಲೆಯಲ್ಲಿ ಅತ್ತಿಬೆಲೆ ಮತ್ತು ಯಲಹಂಕ ಪೊಲೀಸ್ ಠಾಣೆಯಲ್ಲಿ ಎರಡು ಎಫ್ ಐ ಆರ್ ದಾಖಲಾಗಿದೆ ಎಂದು ಸ್ಥಳೀಯ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಫ್ಲೈಯಿಂಗ್ ಸ್ಕ್ವಾಡ್ ತಂಡಗಳು ಮತ್ತು ಪೊಲೀಸರು ರೂ 9,53,075.10 ಮೌಲ್ಯದ 2534.33 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ ಮತ್ತು ರೂ 12,360 ನಗದನ್ನು ವಶಪಡಿಸಿಕೊಂಡಿದ್ದಾರೆ. ಒಟ್ಟಾರೆಯಾಗಿ, ಫ್ಲೈಯಿಂಗ್ ಸ್ಕ್ವಾಡ್‌ಗಳು 238 ಪ್ರಕರಣಗಳಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಿವೆ.

57,42,562- ಮತ್ತು 17,78,200 ಮೌಲ್ಯದ 76.19 ಕೆಜಿ ಎನ್‌ಡಿಪಿಎಸ್ ಮತ್ತು 338  ಪ್ರಕರಣಗಳು, ಪರವಾನಗಿ ಷರತ್ತುಗಳ ಉಲ್ಲಂಘನೆಗಾಗಿ 1174 ಪ್ರಕರಣಗಳು, 75 ಎನ್‌ಡಿಪಿಎಸ್ ಪ್ರಕರಣಗಳು ಮತ್ತು ಕರ್ನಾಟಕ ಅಬಕಾರಿ ಕಾಯ್ದೆ-1965 ರ ಸೆಕ್ಷನ್ 15 (ಎ) ಅಡಿಯಲ್ಲಿ 2,484 ಪ್ರಕರಣಗಳನ್ನು ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ