ರಾಜ್ಯ

ಸೂರಜ್ ರೇವಣ್ಣ ವಿರುದ್ಧ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Shilpa D

ಬೆಂಗಳೂರು:  ಹಾಸನ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಂದ ವಿಧಾನ ಪರಿಷತ್‌ಗೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಆರ್.ಸೂರಜ್ (ಸೂರಜ್‌ ರೇವಣ್ಣ) ಅವರ ನಾಮಪತ್ರ ಕಾನೂನು ಬಾಹಿರವಾಗಿದೆ’ ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಸಂಬಂಧ ಹಾಸನ ಜಿಲ್ಲೆ ದಂಡಿಗಾನ ಹೋಬಳಿಯ ಕುಂದೂರು ಗ್ರಾಮದ ಕೆ.ಎಲ್.ಹರೀಶ್‌ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಜಾಗೊಳಿಸಿತು.

ಚುನಾವಣಾ ವೇಳಾಪಟ್ಟಿ ಘೋಷಣೆಯಾದ ನಂತರ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ನಿಮ್ಮ ಆಕ್ಷೇಪಣೆ ಏನಾದರೂ ಇದ್ದರೆ ಅದನ್ನು ಚುನಾವಣಾ ತಕರಾರು ಅರ್ಜಿ ಸಲ್ಲಿಸಿ ಪರಿಹಾರ ಪಡೆಯಿರಿ’ ಎಂದು ನ್ಯಾಯಪೀಠ ಆದೇಶಿಸಿದೆ

ಸೂರಜ್‌ ಅವರು ತಮ್ಮ ನಾಮಪತ್ರದೊಂದಿಗೆ ಸಲ್ಲಿಸಿರುವ ನಮೂನೆ 26ರ ಅಡಿಯಲ್ಲಿನ ಪ್ರಮಾಣ ಪತ್ರದಲ್ಲಿ ಅನೇಕ ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ಮರೆಮಾಚಿದ್ದಾರೆ. ತಮ್ಮ ಹಾಗೂ ಕುಟುಂಬದ ಸದಸ್ಯರ ಆಸ್ತಿ ವಿವರ, ನಗದು, ಸಾಲ ಹಾಗೂ ಆರ್ಥಿಕ ವಿವರಗಳನ್ನು ಸಂಪೂರ್ಣವಾಗಿ ಬಹಿರಂಗ ಪಡಿಸಿಲ್ಲ ಎಂದು ಆಕ್ಷೇಪಣೆ ಸಲ್ಲಿಸಲಾಗಿತ್ತು.

SCROLL FOR NEXT