ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾದಿಂದ 6 ಸಾವು: ಬೆಂಗಳೂರಿನಲ್ಲಿ 244 ಸೇರಿ 399 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 399 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,99,098ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 399 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,99,098ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಆರು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,249ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 244 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,58,119ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಮೂವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 238 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,53,565ಕ್ಕೆ ಏರಿಕೆಯಾಗಿದೆ. ಇನ್ನು 7,255 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

Main Tera Hero: ರಿರಿಲೀಸ್; ಗರ್ಲ್ ಫ್ರೆಂಡ್ ಗಾಗಿ ಅಭಿಮಾನಿಯ ಡ್ಯಾನ್ಸ್ , ವಿಡಿಯೋ ವೈರಲ್, ವರುಣ್ ಧವನ್ ಹೇಳಿದ್ದೇನು?

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್ ! JSP ಕಾರ್ಯಕರ್ತರಿಗೆ ಖಡಕ್ ಸೂಚನೆ

SCROLL FOR NEXT