ರವಿ ಕಾಂತೇಗೌಡ 
ರಾಜ್ಯ

ಬೆಂಗಳೂರು: ಸಂಚಾರಿ ಪೊಲೀಸ್ ಜಂಟಿ ಆಯುಕ್ತ ಬಿ.ಆರ್ ರವಿಕಾಂತೇಗೌಡ ಮನೆಯಲ್ಲಿ ಕಳ್ಳತನ

ಟ್ರಾಫಿಕ್ ಪೊಲೀಸ್ ಜಂಟಿ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಮನೆಯಲ್ಲಿ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಸಂಜಯನಗರದಲ್ಲಿರುವ ತಮ್ಮ ನಿವಾಸದಲ್ಲಿ ಮೊಬೈಲ್ ಸೇರಿದಂತೆ ಇನ್ನಿತರ ವಸ್ತುಗಳು ಕಳವು ಆಗಿವೆ.‌

ಬೆಂಗಳೂರು: ಟ್ರಾಫಿಕ್ ಪೊಲೀಸ್ ಜಂಟಿ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಮನೆಯಲ್ಲಿ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಸಂಜಯನಗರದಲ್ಲಿರುವ ತಮ್ಮ ನಿವಾಸದಲ್ಲಿ ಮೊಬೈಲ್ ಸೇರಿದಂತೆ ಇನ್ನಿತರ ವಸ್ತುಗಳು ಕಳವು ಆಗಿವೆ.‌

ಬಿ.ಆರ್. ರವಿಕಾಂತೇಗೌಡ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ನಾಪತ್ತೆಯಾಗಿದ್ದು, ಈ ಬಗ್ಗೆ ಸಂಜಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬಳ್ಳಾರಿಯ ಮಹಿಳೆಯೊಬ್ಬರು ರವಿಕಾಂತೇಗೌಡ ಮನೆಯಲ್ಲಿ ಕೆಲ ವರ್ಷಗಳಿಂದ ಕೆಲಸಕ್ಕಿದ್ದರು. ಯಾರಿಗೂ ಹೇಳದೇ ಅವರು ಸೋಮವಾರ ಮನೆಯಿಂದ ಹೊರಗೆ ಹೋಗಿ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಸಲ್ಲಿಕೆಯಾದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಮಹಿಳೆಯ ಕಾಯಂ ವಿಳಾಸ ಹಾಗೂ ಅವರ ಸಂಬಂಧಿಕರ ಮಾಹಿತಿ ಕಲೆ ಹಾಕಲಾಗಿದೆ. ಮಹಿಳೆ ಇರುವ ಜಾಗವನ್ನು ಪತ್ತೆ ಮಾಡಲಾಗಿದ್ದು, ಅವರನ್ನು ನಗರಕ್ಕೆ ಕರೆತಂದು ಹೇಳಿಕೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ