ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ನಾಳೆ ಸಚಿವ ಸಂಪುಟ ಸಭೆಯಲ್ಲಿ ಕೋವಿಡ್ ಬಗ್ಗೆ ಚರ್ಚೆ, ರಾಜ್ಯಕ್ಕೆ ಅನ್ವಯವಾಗುವಂತೆ ಮಾರ್ಗಸೂಚಿ ಪ್ರಕಟ: ಸಿಎಂ ಬೊಮ್ಮಾಯಿ

ಕೋವಿಡ್-19 ಹೆಚ್ಚುತ್ತಿರುವ ಮಧ್ಯೆ ರಾಜ್ಯದಲ್ಲಿನ ಸ್ಥಿತಿಗತಿ ಬಗ್ಗೆ ಇಂದು ಬುಧವಾರ ನಡೆಯುವ ಸಭೆಯಲ್ಲಿ ಅನೌಪಚಾರಿಕವಾಗಿ ಮಾಹಿತಿ ಪಡೆದುಕೊಳ್ಳುತ್ತೇನೆ, ಡಿಸೆಂಬರ್-ಜನವರಿ ತಿಂಗಳಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಕೋವಿಡ್-19 ಹೆಚ್ಚುತ್ತಿರುವ ಮಧ್ಯೆ ರಾಜ್ಯದಲ್ಲಿನ ಸ್ಥಿತಿಗತಿ ಬಗ್ಗೆ ಇಂದು ಬುಧವಾರ ನಡೆಯುವ ಸಭೆಯಲ್ಲಿ ಅನೌಪಚಾರಿಕವಾಗಿ ಮಾಹಿತಿ ಪಡೆದುಕೊಳ್ಳುತ್ತೇನೆ, ಡಿಸೆಂಬರ್-ಜನವರಿ ತಿಂಗಳಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಅಧಿಕಾರಿಗಳ ಸಭೆ ಕರೆದಿದ್ದೇನೆ. ಅದರಲ್ಲಿ ನವೆಂಬರ್ ತಿಂಗಳಲ್ಲಿ ರಾಜ್ಯದ ಕೋವಿಡ್ ಸ್ಥಿತಿಗತಿ ಬಗ್ಗೆ ಅನೌಪಚಾರಿಕವಾಗಿ ಚರ್ಚೆ ನಡೆಸಿ ಮಾಹಿತಿ ಪಡೆಯುತ್ತೇನೆ. ನಾಳೆ ಸಚಿವ ಸಂಪುಟ ಸಭೆ ಕರೆದಿದ್ದು ಅದರಲ್ಲಿ ಮುಂದಿನ ಕ್ರಮಗಳ ಬಗ್ಗೆ ಗಂಭೀರವಾದ ಚರ್ಚೆ ನಡೆಸುತ್ತೇವೆ. ರಾಜ್ಯಕ್ಕೆ ಬೇಕಾದ ಮಾರ್ಗಸೂಚಿ, ಕ್ರಮಗಳನ್ನು ತರಲಾಗುವುದು ಎಂದರು.

ಕೊರೋನಾ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಸರ್ಕಾರ ಬಹಳ ಮುಕ್ತವಾಗಿದೆ. ಸದ್ಯಕ್ಕೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಹಲವು ಹಾಸ್ಟೆಲ್, ವಸತಿ ಶಾಲೆಗಳಲ್ಲಿ ಕೊರೋನಾ ಕ್ಲಸ್ಟರ್ ಗಳು ಏರ್ಪಟ್ಟಿರುವುದರಿಂದ ಶಾಲೆಗಳಲ್ಲಿ ಕಠಿಣ ಕ್ರಮ ತರಬೇಕಿದೆ. ಬರುವ ದಿನಗಳಲ್ಲಿ ಕ್ಲಸ್ಟರ್ ಗಳಿಗೆ ಮತ್ತು ಓಮಿಕ್ರಾನ್ ಬಗ್ಗೆ ಯಾವ ರೀತಿ ಮಾರ್ಗಸೂಚಿ ಹೊರಡಿಸಬೇಕೆಂದು ನಾಳೆಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸುತ್ತೇವೆ ಎಂದರು.

ಕೇಂದ್ರ ಸರ್ಕಾರ ಕೂಡ ಹಲವು ಮಾರ್ಗಸೂಚಿಗಳನ್ನು ಸಲಹೆ ನೀಡಿ ಕಳುಹಿಸಿದೆ. ಇವೆಲ್ಲವನ್ನು ಪರಾಮರ್ಶಿಸಿ ರಾಜ್ಯಕ್ಕೆ ಅನ್ವಯವಾಗುವಂತೆ ತರುತ್ತೇವೆ. ಕ್ರಿಸ್ ಮಸ್, ಹೊಸವರ್ಷಾಚರಣೆ ಬಗ್ಗೆ ಕೂಡ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಇಂದು ಮಾತನಾಡುವ ವೇಳೆ ಶಾಲೆಯಲ್ಲಿ ಕೊರೋನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಾದ ಅಗತ್ಯವಿದೆ ಎಂದು ಸಿಎಂ ಹೇಳಿದರು. ಶಾಲೆಗಳಲ್ಲಿ ಶಿಕ್ಷಕರು, ಸಿಬ್ಬಂದಿ ಕಡ್ಡಾಯವಾಗಿ ಡಬಲ್ ಡೋಸ್ ವ್ಯಾಕ್ಸಿನ್ ಪಡೆದುಕೊಳ್ಳುವುದು, ಸ್ವಚ್ಛತೆ ಕಾಪಾಡುವುದು, ಶಿಕ್ಷಕರು-ಮಕ್ಕಳು ಕೊರೋನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದು ಅತ್ಯಗತ್ಯ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT