ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಮನೆ 
ರಾಜ್ಯ

ಮಂಗಳೂರು: ಪತ್ನಿ-ಇಬ್ಬರು ಮಕ್ಕಳನ್ನು ಕೊಂದು ಪತಿ ನೇಣಿಗೆ ಶರಣು

ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಗಳೂರು ನಗರ ವ್ಯಾಪ್ತಿಯ ಮೊರ್ಗನ್ ಗೇಟ್ ಬಳಿ ಇಂದು ಬುಧವಾರ ಈ ದುರ್ಘಟನೆ ನಡೆದಿದೆ. 

ಮಂಗಳೂರು: ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಗಳೂರು ನಗರ ವ್ಯಾಪ್ತಿಯ ಮೊರ್ಗನ್ ಗೇಟ್ ಬಳಿ ಇಂದು ಬುಧವಾರ ಈ ದುರ್ಘಟನೆ ನಡೆದಿದೆ. 

ವ್ಯಕ್ತಿ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಮೊದಲು ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡವರನ್ನು ಟ್ರಕ್ ಚಾಲಕ ನಾಗೇಶ್ ಸದೇರಿಗುಪ್ಪೆ(30ವ), ವಿಜಯಲಕ್ಷ್ಮಿ(26ವ) ಮಕ್ಕಳಾದ ಸ್ವಪ್ನಾ(8ವ) ಮತ್ತು ಸಮರ್ಥ್(4ವ) ಎಂದು ಗುರುತಿಸಲಾಗಿದೆ. ಸಾವಿಗೆ ಶರಣಾಗಿರುವ ನಾಗೇಶ್ ಚಾಲಕನಾಗಿ ಮತ್ತು ವಿಜಯಲಕ್ಷ್ಮಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು.

ದಂಪತಿ ಬಾಗಲಕೋಟೆ ಜಿಲ್ಲೆಯ ಬಿಳಗಿ ತಾಲ್ಲೂಕಿನ ಸುನಗ್ ಗ್ರಾಮದವರಾಗಿದ್ದು ಮಂಗಳೂರಿನಲ್ಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಪತ್ನಿ ಮತ್ತು ಮಕ್ಕಳಿಗೆ ವಿಷವುಣಿಸಿ ಕೊಂದ ನಂತರ ನಾಗೇಶ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 15 ದಿನಗಳ ಹಿಂದಷ್ಟೇ ಬಾಡಿಗೆಗೆ ಈ ಮನೆಗೆ ದಂಪತಿ ಬಂದು ವಾಸವಾಗಿದ್ದರು. 

ನಾಪತ್ತೆಯಾಗಿದ್ದ ಪತ್ನಿ: ಪತ್ನಿ ವಿಜಯಲಕ್ಷ್ಮಿ ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದಳು. ಆಗ ನಾಗೇಶ್ ಮಂಗಳೂರು ದಕ್ಷಿಣ ವಿಭಾಗ ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದನು. ಕೆಲ ದಿನಗಳು ಕಳೆದ ನಂತರ ವಿಜಯಲಕ್ಷ್ಮಿ ಮನೆಗೆ ಹಿಂತಿರುಗಿದ ನಂತರ ನಾಗೇಶ್ ನೀಡಿದ್ದ ದೂರನ್ನು ಹಿಂತೆಗೆದುಕೊಂಡಿದ್ದನು. 

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಡಿಸಿಪಿ ಹರಿಹರನ್ ಶಂಕರ್ ತಿಳಿಸಿದ್ದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

FlyDubai ವಿಮಾನ ಹಾರಾಟಕ್ಕೆ ಒಮಾನ್ ನಲ್ಲಿ ನಿಷೇಧ: ಪತನಕ್ಕೆ ಯತ್ನಿಸಿದ್ದ ಸಹ ಪೈಲಟ್‌ ಉಗ್ರವಾದ ಹಿನ್ನಲೆಯವನೇ?

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!