ಬೆಳೆ ಹಾನಿಯ ಸಾಂದರ್ಭಿಕ ಚಿತ್ರ 
ರಾಜ್ಯ

ಆ್ಯಪ್ ಮೂಲಕ ರೈತರ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ

ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯ ಮಾಹಿತಿಯನ್ನು ಜಿ.ಪಿ.ಎಸ್ ಆಧಾರಿತ ಮೊಬೈಲ್ ಆ್ಯಪ್ ಬಳಸಿ ಸಮೀಕ್ಷೆ ನಡೆಸಲು ತಂತ್ರಜ್ಞಾನ ಅಭಿವೃದ್ಧಿಪಡಿಸಲಾಗಿದ್ದು, ಈ ವರ್ಷದ ಹಿಂಗಾರು ಹಂಗಾಮಿನಲ್ಲಿ ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿರುವ...

ಬೆಂಗಳೂರು: ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯ ಮಾಹಿತಿಯನ್ನು ಜಿ.ಪಿ.ಎಸ್ ಆಧಾರಿತ ಮೊಬೈಲ್ ಆ್ಯಪ್ ಬಳಸಿ ಸಮೀಕ್ಷೆ ನಡೆಸಲು ತಂತ್ರಜ್ಞಾನ ಅಭಿವೃದ್ಧಿಪಡಿಸಲಾಗಿದ್ದು, ಈ ವರ್ಷದ ಹಿಂಗಾರು ಹಂಗಾಮಿನಲ್ಲಿ ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿರುವ ಬೆಳೆಗಳನ್ನು “Farmer Rabi Crop Survey Karnataka -2021-22” ಎಂಬ ಆ್ಯಪ್‌ನಲ್ಲಿ ದಾಖಲಿಸಬಹುದಾಗಿದೆ.

ಸಮೀಕ್ಷೆ ಮೂಲಕ ಸಂಗ್ರಹಿಸಿದ ಬೆಳೆ ಮಾಹಿತಿಯನ್ನು ಮೇಲ್ವಿಚಾರಕರ ಮೂಲಕ ಅನುಮೋದನೆ ಮಾಡಿದ ನಂತರ, ಈ ಮಾಹಿತಿಯನ್ನು ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನಗಳ ಖರೀದಿಗಾಗಿ, ಬೆಳೆ ವಿಮೆ ಯೋಜನೆಗಾಗಿ, ಪ್ರಕೃತಿ ವಿಕೋಪದಿಂದಾದ ಬೆಳೆ ನಷ್ಟ ಪರಿಹಾರ ನೀಡುವ ಸಮಯದಲ್ಲಿ ಉಪಯೋಗಿಸಲಾಗುತ್ತದೆ.

ಆದ್ದರಿಂದ ಈ ವರ್ಷದ ಹಿಂಗಾರು ಹಂಗಾಮಿನಲ್ಲಿ ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿರುವ ಬೆಳೆಗಳನ್ನು “Farmer Rabi Crop Survey Karnataka-2021-22” ಎಂಬ ಆ್ಯಪ್‌ನ್ನು ಪ್ಲೇಸ್ಟೋರ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಸ್ವತಃ ಬೆಳೆ ಮಾಹಿತಿಯನ್ನು ದಾಖಲಿಸಬಹುದಾಗಿದೆ.

ಈ ಆ್ಯಪ್‌ನಲ್ಲಿ ಆರ್ಥಿಕ ವರ್ಷ ಹಾಗೂ ಋತುವನ್ನು ದಾಖಲಿಸಬೇಕು. ನಂತರ ಆಧಾರ್ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿ, ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸುವುದರಿಂದ ರೈತರ ಮೊಬೈಲ್ ಸಂಖ್ಯೆಗೆ ಬರುವ ಒ.ಟಿ.ಪಿ.ಯನ್ನು ದಾಖಲಿಸಬೇಕು. ನಂತರ ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್, ಹಿಸ್ಸಾ, ರೈತರ ಮಾಲೀಕರ ಹೆಸರು ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಿ, ಸರ್ವೆ ನಂಬರ್‌ಗಳ ಗಡಿ ರೇಖೆಯೊಳಗೆ ನಿಂತು ವಿವರವನ್ನು ದಾಖಲಿಸಬೇಕು.

ಈ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಪಾಳು ಬಿದ್ದಿರುವ ಪ್ರದೇಶ, ಈಗಾಗಲೇ ಕಟಾವಾದ ಪ್ರದೇಶ, ಕೃಷಿಯೇತರ ಬಳಕೆ(ಕೊಟ್ಟಿಗೆ, ಕೃಷಿ ಹೊಂಡ, ಮನೆ ಇತರೆ) ಪ್ರದೇಶದ ವಿವರವನ್ನು ದಾಖಲಿಸಬಹುದಾಗಿದ್ದು, ರೈತರು ತಾವು ಬೆಳೆದ ಪ್ರತಿ ಬೆಳೆಯ ವಿಸ್ತೀರ್ಣದ ಜೊತೆಗೆ 2 ಪೋಟೋ ತೆಗೆದು ಮಾಹಿತಿಯನ್ನು ಅಪ್‌ಲೋಡ್ ಮಾಡಬೇಕು.

‌‌ಹೆಚ್ಚಿನ ಮಾಹಿತಿಗಾಗಿ ನಿಮ್ಮ ಗ್ರಾಮದ ಖಾಸಗಿ ನಿವಾಸಿ(Private Resident), ಹತ್ತಿರದ ನಾಡ ಕಚೇರಿ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿ, ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಮತ್ತು ರೇಷ್ಮೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಹಾಗೂ ಬೆಳೆ ಸಮೀಕ್ಷೆ ಸಹಾಯವಾಣಿ: 8448447715 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್