ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರು ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರ 
ರಾಜ್ಯ

ಹೆಲಿಕಾಪ್ಟರ್ ಪತನ: ಗಾಯಾಳು ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರು ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರ

ಕ್ಯಾ. ವರುಣ್ ಸಿಂಗ್ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರೂ, ಸ್ಥಿರವಾಗಿದೆ. ಅವರನ್ನು ಉಳಿಸಲು ಎಲ್ಲಾ ಬಗೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಬೆಂಗಳೂರು: ಬುಧವಾರ ಭಾರತೀಯ ಸೇನಾ ದಂಡನಾಯಕ ಬಿಪಿನ್ ರಾವತ್ ಅವರನ್ನು ಬಲಿಪಡೆದ ಸೇನಾ ಹೆಲಿಕಾಪ್ಟರ್ ಅವಘಡದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಲ್ಲಿ ಮಾಧ್ಯಮ ಸಿಬ್ಬಂದಿ ಪ್ರವೇಶವನ್ನು ನಿಷೇಧಿಸಲಾಗಿದೆ.  

ಹೆಲಿಕಾಪ್ಟರ್ ಅವಘಡದಲ್ಲಿ ಒಟ್ಟು 13 ಮಂದಿ ಸಾವನ್ನಪ್ಪಿದ್ದರು. ಮೂಲಗಳ ಪ್ರಕಾರ ಕ್ಯಾ. ವರುಣ್ ಸಿಂಗ್  ಅವರು ಶೇ.80ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರೂ, ಸ್ಥಿರವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಅವರನ್ನು ಉಳಿಸಲು ಎಲ್ಲಾ ಬಗೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಬುಧವಾರ ಬೆಳಿಗ್ಗೆ 11.48ರ ಸಮಯದಲ್ಲಿ ಟೇಕಾಫ್ ಆದ ಹೆಲಿಕಾಪ್ಟರ್ 10 ಕಿ.ಮೀ ದೂರದಲ್ಲಿ ಪತನಗೊಂಡಿತ್ತು. ಪತನಕ್ಕೆ ಖಚಿತ ಕಾರಣ ತಿಳಿದುಬಂದಿಲ್ಲ. ನತದೃಷ್ಟ ಹೆಲಿಕಾಪ್ಟರಿನಲ್ಲಿದ್ದ ಬ್ಲ್ಯಾಕ್ ಬಾಕ್ಸನ್ನು ಪತ್ತೆಹಚ್ಚಲಾಗಿದ್ದು ಪರಿಶೀಲನೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್