ಸಾಂದರ್ಭಿಕ ಚಿತ್ರ 
ರಾಜ್ಯ

ಶಾಲೆಗಳಲ್ಲಿ ಮೊಟ್ಟೆ ನೀಡುವುದಕ್ಕೆ ಪೇಜಾವರ ಶ್ರೀ ವಿರೋಧ

ರಾಜ್ಯದ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಬೇಯಿಸಿದ ಮೊಟ್ಟೆ ಹಾಗೂ ಬಾಳೆಹಣ್ಣು ನೀಡಲು ಮುಂದಾಗಿರುವ ರಾಜ್ಯ ಸರ್ಕಾರ ಕ್ರಮವನ್ನು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು...

ಉಡುಪಿ: ರಾಜ್ಯದ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಬೇಯಿಸಿದ ಮೊಟ್ಟೆ ಹಾಗೂ ಬಾಳೆಹಣ್ಣು ನೀಡಲು ಮುಂದಾಗಿರುವ ರಾಜ್ಯ ಸರ್ಕಾರ ಕ್ರಮವನ್ನು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಗುರುವಾರ ವಿರೋಧಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಹಾರವು ವ್ಯಕ್ತಿಯ ಆಯ್ಕೆಯಾಗಿದೆ ಮತ್ತು ಅದನ್ನು ಯಾರೂ ಒತ್ತಾಯಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಪ್ರತಿಯೊಂದು ಸಮುದಾಯವೂ ತಮ್ಮದೇ ಆದ ಆಹಾರ ಪದ್ಧತಿಯನ್ನು ಅನುಸರಿಸುತ್ತಿದ್ದು, ಮಕ್ಕಳಿಗೆ ಮೊಟ್ಟೆ ನೀಡುವುದು ಸರ್ಕಾರದ ಕೆಲಸವಲ್ಲ ಎಂದರು.

ಶಾಲೆಗಳಲ್ಲಿ ಸಾಮೂಹಿಕವಾಗಿ ಮೊಟ್ಟೆ ನೀಡುವುದರಿಂದ ಹಲವರ ನಂಬಿಕೆಗಳಿಗೆ ಧಕ್ಕೆಯುಂಟಾಗುತ್ತದೆ. ಶಾಲೆ ಇರುವುದು ಶಿಕ್ಷಣ ನೀಡಲೆಂದು. ಯಾವುದೇ ಸಮುದಾಯದ ಜೀವನಶೈಲಿಯನ್ನು ಬದಲಿಸಬಾರದು. ಯಾರಿಗೆ ಯಾವುದನ್ನು ಸೇವಿಸಲು ಇಷ್ಟವಿದೆಯೋ ಅದನ್ನು ಸೇವಿಸಲಿ. ಸರ್ಕಾರ ಅದರ ಖರ್ಚು ವಹಿಸಿಕೊಳ್ಳಲಿ ಎಂದು ಸಲಹೆ ಮಾಡಿದರು.

''ಮೊಟ್ಟೆ ಖರೀದಿಗೆ ಖರ್ಚು ಮಾಡಲು ಉದ್ದೇಶಿಸಿರುವ ಹಣವನ್ನು ಸರ್ಕಾರ ಮರುಪಾವತಿ ಮಾಡಲಿ. ಸಮುದಾಯಗಳ ಜೀವನ ಶೈಲಿ ಮತ್ತು ಪದ್ಧತಿಗಳನ್ನು ಬದಲಾಯಿಸಲು ಶಾಲೆಗಳು ಇಲ್ಲ. ಎಲ್ಲ ಸಮುದಾಯದ ಮಕ್ಕಳು ಶಾಲೆಗಳಲ್ಲಿ ಕಲಿಯುವುದರಿಂದ ಸರ್ಕಾರ ಮೊಟ್ಟೆ ತಿನ್ನುವುದನ್ನು ಕಡ್ಡಾಯ ಮಾಡಬಾರದು ಎಂದರು.

ಇದೇ ವೇಳೆ ರಾಜ್ಯ ಸರ್ಕಾರ ಮಂಡಿಸಿರುವ ಮತಾಂತರ ನಿಷೇಧ ಮಸೂದೆಗೆ ಸಂಬಂಧಿಸಿದಂತೆ ಮಾತನಾಡಿದ ಪೇಜಾವರ ಶ್ರೀಗಳು, ಮತಾಂತರದಿಂದ ಹಲವು ಕುಟುಂಬಗಳು ಹಾಳಾಗಿದ್ದು, ಇತ್ತೀಚಿಗೆ ಮಂಗಳೂರಿನಲ್ಲಿ ಇಡೀ ಕುಟುಂಬವೇ ನಾಶವಾಗಿರುವ ಘಟನೆ ಎಷ್ಟು ಕ್ರೂರವಾಗಿದೆ ಎಂಬುದನ್ನು ತೋರಿಸುತ್ತದೆ. ಇದು ನಿಲ್ಲಬೇಕು. ಹೀಗಾಗಿ ರಾಜ್ಯ ಸರ್ಕಾರ ಶೀಘ್ರವೇ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬೇಕು ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ