ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿವೇತನ ಯೋಜನೆಗೆ ಸರ್ಕಾರದ ತಿದ್ದುಪಡಿ
ರೈತರ ಮಕ್ಕಳಿಗೆ ಶಿಕ್ಷಣ ವಿದ್ಯಾರ್ಥಿವೇತನ ನೀಡುವ ನಿಯಮಗಳಿಗೆ ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ. ವಿದ್ಯಾರ್ಥಿಗಳು ಬೇರೆ ವಿದ್ಯಾರ್ಥಿ ವೇತನ ಪಡೆಯುತ್ತಿದ್ದರೂ ಸಹ ‘ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ವಿದ್ಯಾರ್ಥಿವೇತನ’ ಪಡೆಯಬಹುದಾಗಿದೆ.
ಬೆಂಗಳೂರು: ರೈತರ ಮಕ್ಕಳಿಗೆ ಶಿಕ್ಷಣ ವಿದ್ಯಾರ್ಥಿವೇತನ ನೀಡುವ ನಿಯಮಗಳಿಗೆ ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ. ವಿದ್ಯಾರ್ಥಿಗಳು ಬೇರೆ ವಿದ್ಯಾರ್ಥಿ ವೇತನ ಪಡೆಯುತ್ತಿದ್ದರೂ ಸಹ ‘ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ವಿದ್ಯಾರ್ಥಿವೇತನ’ ಪಡೆಯಬಹುದಾಗಿದೆ.
ಶುಕ್ರವಾರ ಹೊರಡಿಸಿರುವ ಆದೇಶದಂತೆ ವಿವಿಧ ಇಲಾಖೆಗಳಲ್ಲಿ ಲಭ್ಯವಿರುವ ಮಾಹಿತಿ ಆಧರಿಸಿ ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ವಿದ್ಯಾರ್ಥಿ ವೇತನಕ್ಕೆ ಅರ್ಹ ವಿದ್ಯಾರ್ಥಿಗಳನ್ನು ಗುರುತಿಸಿ ಉನ್ನತ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡಲಿದೆ.
ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಗಳನ್ನು ಸ್ಕಾಲರ್ಶಿಪ್ಗಾಗಿ ಪರಿಗಣಿಸಲಾಗುತ್ತದೆ, ಇದರಲ್ಲಿ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ.
ಇ-ಆಡಳಿತ ಇಲಾಖೆಯ 'ಕುಟುಂಬ' ಅಪ್ಲಿಕೇಶನ್ನಲ್ಲಿ ನೋಂದಾಯಿಸಿಸಬೇಕಾಗಿದೆ. ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ರೈತರ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಸಹಾಯ ಮಾಡಲು ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ವಿದ್ಯಾರ್ಥಿವೇತನವನ್ನು ಘೋಷಿಸಿದರು. ಈ ಯೋಜನೆಗೆ 1000 ಕೋಟಿ ಮೀಸಲಿಡುವುದಾಗಿ ಘೋಷಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.