ಸಚಿವ ಬಿ. ಸಿ. ನಾಗೇಶ್ 
ರಾಜ್ಯ

15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ; ಶೀಘ್ರದಲ್ಲೇ ಅಧಿಸೂಚನೆ: ಬಿಸಿ ನಾಗೇಶ್

ಶಿಕ್ಷಕ ಹುದ್ದೆಗಳ ಆಕಾಂಕ್ಷಿಗಳಿಗೆ ಸಿಹಿಸುದ್ದಿ. 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲಿಯೇ ಅಧಿಸೂಚನೆ ಹೊರಬೀಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.

ಬೆಂಗಳೂರು: ಶಿಕ್ಷಕ ಹುದ್ದೆಗಳ ಆಕಾಂಕ್ಷಿಗಳಿಗೆ ಸಿಹಿಸುದ್ದಿ. 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲಿಯೇ ಅಧಿಸೂಚನೆ ಹೊರಬೀಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ (6ರಿಂದ 8ನೇ ತರಗತಿ) ಶಿಕ್ಷಕರ 10 ಸಾವಿರ ಹುದ್ದೆ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಪದವೀಧರ ಪ್ರಾಥಮಿಕ ಶಾಲಾ (6ರಿಂದ 8ನೇ ತರಗತಿ) ಶಿಕ್ಷಕರ 5 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು, ಕೆಲ ದಿನಗಳಲ್ಲೇ ನೇಮಕ ಪ್ರಕ್ರಿಯೆಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಶಿಕ್ಷಕರ ಕೊರತೆ ನೀಗಿಸಿ ಶಿಕ್ಷಣದ ಗುಣಮಟ್ಟ ಕಾಪಾಡಲು ಈಗಾಗಲೇ 23 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲಾಗುತ್ತಿದ್ದು, ಹೆಚ್ಚುವರಿಯಾಗಿ 4 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲು ನಿರ್ಧರಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಅತಿಯಾಗಿ ಭಯ ಹುಟ್ಟಿಸಬೇಡಿ, ನಿಮ್ಮ ಹೆದರಿಕೆಗೆ ಬಗ್ಗಲ್ಲ: ಗಾಯದ Video ಶೇರ್​ ಮಾಡಿ ಪೊಲೀಸರಿಗೆ ಆಮೀರ್ ಖಾನ್ ಸೊಸೆ ತಿರುಗೇಟು!

CJP ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್​ಗೆ ಬಿಗ್ ಶಾಕ್; ಗಡಿಪಾರು ಸಾಧ್ಯತೆ

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಹಾರ್ಮೊಜ್ ಮೇಲೆ ಈಗಲೂ ನಮ್ಮದೇ ನಿಯಂತ್ರಣ: ವಾಸ್ತವಕ್ಕೂ ಅಮೆರಿಕ ಹೇಳಿಕೆಗಳಿಗೂ ತಾಳೆಯಾಗುವುದಿಲ್ಲ- ಇರಾನ್