ರಾಜ್ಯ

ರಾಜ್ಯದಲ್ಲಿ ಇಂದು 330 ಕೊರೋನಾ ಹೊಸ ಸೋಂಕು; ಬೆಂಗಳೂರಿನಲ್ಲಿ 1 ಓಮಿಕ್ರಾನ್ ಪ್ರಕರಣ ಪತ್ತೆ!

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಏರಿಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 330 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಬೆಂಗಳೂರಿನಲ್ಲಿ ಒಂದು ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ.

ಕರ್ನಾಟಕದಲ್ಲಿ ಓಮಿಕ್ರಾನ್ ಮೂರನೇ ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ದಕ್ಷಿಣ ಆಫ್ರಿಕಾದಿಂದ ಡಿಸೆಂಬರ್ 1ರಂದು ಬೆಂಗಳೂರಿಗೆ ಬಂದಿದ್ದ 34 ವರ್ಷದ ವ್ಯಕ್ತಿಯಲ್ಲಿ ಓಮಿಕ್ರಾನ್ ಪತ್ತೆಯಾಗಿದ್ದು ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ರಾಜ್ಯದಲ್ಲಿ ಒಟ್ಟಾರೆ ಮೂರು ಓಮಿಕ್ರಾನ್ ಪ್ರಕರಣ ವರದಿಯಾಗಿದೆ.

ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, 'ರಾಜ್ಯದಲ್ಲಿ ಇಂದು ಒಟ್ಟು 330 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 30,00,435ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ನಾಲ್ವರು ಕೊರೋನಾದಿಂದ ಮೃತಪಟ್ಟಿದ್ದು ಸಾವಿನ ಸಂಖ್ಯೆ 38,261ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ 304 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 7,328 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು ಗುಣಮುಖರ ಸಂಖ್ಯೆ 29,54,196ಕ್ಕೆ ಏರಿಕೆಯಾಗಿದೆ. 
ಕೋವಿಡ್-19 ಮರಣ ಪ್ರಮಾಣ ಶೇ.1.21 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.27 ರಷ್ಟಿದೆ. 

ಇಂದು ಬೆಂಗಳೂರು ನಗರದಲ್ಲಿ 205 ಮಂದಿಗೆ ಕೊರೊನಾ ಬಂದಿದ್ದು, 147 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಮೂವರು ಸಾವನ್ನಪ್ಪಿದ್ದು ಸಾವಿನ ಸಂಖ್ಯೆ 16,365ಕ್ಕೆ ಏರಿಕೆಯಾಗಿದೆ.

SCROLL FOR NEXT