ಬಂಧಿತ ದರೋಡೆಕೋರರು 
ರಾಜ್ಯ

ಬಳ್ಳಾರಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 4 ದರೋಡೆಕೋರರ ಬಂಧನ, 41 ಲಕ್ಷ ರೂ. ನಗದು ವಶಕ್ಕೆ!

ಬಳ್ಳಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು,  4 ದರೋಡೆಕೋರರ ಬಂಧಿಸಿ 41 ಲಕ್ಷ ರೂ ನಗದನ್ನು ವಶಕ್ಕೆ ಪಡೆದಿದ್ದಾರೆ.

ಬಳ್ಳಾರಿ: ಬಳ್ಳಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು,  4 ದರೋಡೆಕೋರರ ಬಂಧಿಸಿ 41 ಲಕ್ಷ ರೂ ನಗದನ್ನು ವಶಕ್ಕೆ ಪಡೆದಿದ್ದಾರೆ.

ಬಳ್ಳಾರಿ ನಗರದ ಬಂಗಾರದ ಅಂಗಡಿಯ 41 ಲಕ್ಷ ರೂ ಹಣವನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವಾತನ ಮೇಲೆ ಹಲ್ಲೆ ಮಾಡಿ ಹಣವನ್ನು ಕಸಿದುಕೊಂಡು ಪರಾರಿಯಾಗಿದ್ದ ನಾಲ್ವರನ್ನು ಬಳ್ಳಾರಿ ಬ್ರೂಸ್ ಪೇಟೆ ಪೊಲೀಸರು ಘಟನೆ ನಡೆದ ದಿನವೇ ಹಣ ಸಮೇತ ಬಂಧಿಸಿದ್ದಾರೆ.

ಈ ಬಗ್ಗೆ ಎಸ್ಪಿ ಕಚೇರಿಯಿಂದ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು. ಚಿನ್ನಾಭರಣದ ಅಂಗಡಿಯ ಕೆಲಸಗಾರ ಮೆಹಬೂಬ್ ಭಾಷ ಎಂಬಾತ ಹಣವನ್ನು‌ ತೆಗೆದುಕೊಂಡು‌ ಬೆಂಗಳೂರಿಗೆ ಹೊರಟಿದ್ದನಂತೆ ಆತ ನಗರದ ಗಡಗಿ ಚೆನ್ನಪ್ಪ ಸರ್ಕಲ್ ಬಳಿಯ ಪಶು ಆಸ್ಪತ್ರೆಯ ಬಳಿ ಬಂದಾಗ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಆತನಿಗೆ ಹಲ್ಲೆ ಮಾಡಿ ಹಣ ಕಸಿದುಕೊಂಡು ಪರಾರಿಯಾಗಿದ್ದಾರೆ. ತಕ್ಷಣ ಆತ ಪೊಲೀಸರಿಗೆ ದೂರು ನೀಡಿದ್ದಾನೆ.

ಪೊಲೀಸರು ಕಾರ್ಯಪ್ರವೃತ್ತರಾಗಿ ಹಣ ಕದ್ದ ನಗರದ ಬಂಡಿಮೋಟ್ ನ ಅಸಾದ್ (25), ಗುಗ್ಗರಹಟ್ಟಿಯ ರಸೂಲ್(35), ಕೋಟೆ ಪ್ರದೇಶದ ವೆಂಕಟೇಶ್ (34) ಮತ್ತು ಜಾಗೃತಿ ನಗರದ ಧರವೇಶ್ (28) ಅವರನ್ನು ಬಂಧಿಸಿದ್ದು ಕದ್ದ 41 ಲಕ್ಷ ಹಣವನ್ನೂ ವಶಪಡಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

SCROLL FOR NEXT