ಸಚಿವ ಈಶ್ವರಪ್ಪ 
ರಾಜ್ಯ

ಭಾರತವನ್ನು ಪಾಕಿಸ್ತಾನ ಮಾಡಲು ಬಿಡುವುದಿಲ್ಲ: ಸಚಿವ ಈಶ್ವರಪ್ಪ

ಕಾಂಗ್ರೆಸ್ ಸರ್ಕಾರವು ಭಾರತವನ್ನ ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಆರೋಪಿಸಿದ್ದಾರೆ.

ಬೆಳಗಾವಿ: ಕಾಂಗ್ರೆಸ್ ಸರ್ಕಾರವು ಭಾರತವನ್ನ ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಆರೋಪಿಸಿದ್ದಾರೆ.

ಬೆಳಗಾವಿ ಅಧಿವೇಶನಕ್ಕೆ ಆಗಮಿಸಿದ್ದ ಈಶ್ವರಪ್ಪ ಮಾದ್ಯಮದವರೊಂದಿಗೆ ಮಾತನಾಡುತ್ತಾ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಪ್ರಸ್ತಾಪಿಸಿ ಭಾರತವನ್ನು ಪಾಕಿಸ್ತಾನ ಮಾಡಲು ಹೊರಟ ಕಾಂಗ್ರೆಸ್ ಸರ್ಕಾರ, ಈ ವಿಚಾರವನ್ನು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‍ಗೆ ಸದನದಲ್ಲೆ ಪ್ರಶ್ನೆ ಮಾಡುತ್ತೇನೆ ಎಂದರು.

ಪಾಕಿಸ್ತಾನದಲ್ಲಿ 24% ಹಿಂದುಗಳನ್ನ ಕೇವಲ 3% ತಂದು ನಿಲ್ಲಿಸಿರುವ ವಿಚಾರ ಕಾಂಗ್ರೆಸ್ ಪಕ್ಷಕ್ಕೆ ಗೊತ್ತಿಲ್ವ? ಯಾವುದೇ ಕಾರಣಕ್ಕೂ ಆಸೆ ಆಕಾಂಕ್ಷೆಗಳನ್ನು ತೋರಿಸಿ ಬಲವಂತದ ಮತಾಂತರ ನಿಷೇಧ ಕಾಯ್ದೆಯನ್ನು ತರ್ತೇವೆ ಲವ್ ಜಿಹಾದಿ, ಮತಾಂತರ ನಿಷೇಧ ಕಾಯ್ದೆ ಭಾರತೀಯ ಜನತಾ ಪಾರ್ಟಿ ಒಪ್ಪುವುದಿಲ್ಲ ಜೊತೆಗೆ ನಿಷೇಧ ಕಾಯ್ದೆಯನ್ನು ಜಾರಿ ಮಾಡುತ್ತೇವೆ ಎಂದ ಹೇಳಿದರು.

ರಾಹುಲ್ ಗಾಂಧಿ ಹಿಂದು ಅಂತ ಹೇಳಿಕೆ ನೀಡಿದ್ದರೆ ಸಂತೋಷ, ಆದರೆ ಇದೆಲ್ಲ ಚುನಾವಣೆಯಲ್ಲಿ ಹಿಂದು ಮತ್ತು ಮುಸಲ್ಮಾನರ ಮತ ಪಡೆದುಕೊಳ್ಳಲು ಇವರು ಆಡ್ತಾ ಇರೋ ಪ್ರಚಾರದ ನಾಟಕ ಎಂದು ಇದೇ ಸಂದರ್ಭದಲ್ಲಿ ಹೇಳಿಕೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!