ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾದಿಂದ 7 ಸಾವು, ಬೆಂಗಳೂರಿನಲ್ಲಿ 158  ಸೇರಿ 263 ಮಂದಿಗೆ ಪಾಸಿಟಿವ್

Srinivas Rao BV

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 263 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,00934ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಏಳು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38275ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 158  ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,59,183ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 327 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,55,465ಕ್ಕೆ ಏರಿಕೆಯಾಗಿದೆ. ಇನ್ನು 7165 ಸಕ್ರಿಯ ಪ್ರಕರಣಗಳಿವೆ.

SCROLL FOR NEXT