ಬಂಧನ (ಸಾಂಕೇತಿಕ ಚಿತ್ರ) 
ರಾಜ್ಯ

ಮಹಿಳೆ, ಆಕೆಯ ಪುತ್ರಿಯೊಂದಿಗೆ ಅಸಭ್ಯ ವರ್ತನೆ; ವೈದ್ಯಕೀಯ ವಿದ್ಯಾರ್ಥಿ ಬಂಧನ 

ಮಹಿಳೆ ಹಾಗೂ ಆಕೆಯ ಪುತ್ರಿ ಚಲಿಸುತ್ತಿದ್ದ ಕಾರನ್ನು ಹಿಂಬಾಲಿಸಿಕೊಂಡು ಬಂದು ಅಸಭ್ಯ ವರ್ತನೆ ತೋರಿದ ವೈದ್ಯಕೀಯ ವಿದ್ಯಾರ್ಥಿಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. 

ಬೆಂಗಳೂರು: ಮಹಿಳೆ ಹಾಗೂ ಆಕೆಯ ಪುತ್ರಿ ಚಲಿಸುತ್ತಿದ್ದ ಕಾರನ್ನು ಹಿಂಬಾಲಿಸಿಕೊಂಡು ಬಂದು ಅಸಭ್ಯ ವರ್ತನೆ ತೋರಿದ ವೈದ್ಯಕೀಯ ವಿದ್ಯಾರ್ಥಿಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. 

ಈ ಘಟನೆ ಮೂರು ದಿನಗಳ ಹಿಂದೆ ವರದಿಯಾಗಿತ್ತು ಹಾಗೂ ವಾಹನದ ವಿವರ ಪಡೆದ ಪೊಲೀಸರು ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. 

ವಿಜಯ್ ಭಾರದ್ವಾಜ್ ಬಂಧಿತ ವ್ಯಕ್ತಿಯಾಗಿದ್ದು, ಬಿಹಾರ್ ಮೂಲದ ವ್ಯಕ್ತಿಯಾಗಿದ್ದಾರೆ. ವಿವಿ ಪುರಂ ನಲ್ಲಿರುವ ಖಾಸಗಿ ಕಾಲೇಜಿನಲ್ಲಿ ಎಂಎಸ್ ಅಧ್ಯಯನ ಮಾಡುತ್ತಿದ್ದ. ಎಂಬಿಬಿಎಸ್ ಪೂರ್ಣಗೊಳಿಸಿದ್ದ ಈತ ಜಯನಗರದಲ್ಲಿ ವಾಸಿಸುತ್ತಿದ್ದ.

ಹಿರಿಯ ಪೊಲೀಸ್ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ ಮಧ್ಯರಾತ್ರಿ 2:30 ರ ವೇಳೆಗೆ ಮಹಿಳೆ ಹಾಗೂ ಆಕೆಯ ಪುತ್ರಿ ಹೊಸಕೋಟೆಯಿಂದ ಮನೆಗೆ ವಾಪಸ್ಸಾಗುತ್ತಿದ್ದರು. ಹೆಬ್ಬಾಳದ ರಿಂಗ್ ರಸ್ತೆಯಲ್ಲಿರುವ ವೀರನಪಾಳ್ಯದ ಬಳಿ ಬಂದಾಗ ಅವರ ಕಾರಿನ ಟೈರ್ ಪಂಚರ್ ಆಯಿತು. ಟೈರ್ ಬದಲಾವಣೆ ಮಾಡಲು ಯತ್ನಿಸುತ್ತಿದ್ದಾಗ ಕಾರಿನಲ್ಲಿ ಬಂದ ಆರೋಪಿ ಇವರ ಎದುರು ನಿಂತು ಹಣ ಕೇಳಲು ಪ್ರಾರಂಭಿಸಿದ.  ಆದರೆ ಆತನನ್ನು ನಿರ್ಲಕ್ಷಿಸಿದ ಕಾರಣ ಆತ ಮನಸೋ ಇಚ್ಛೆ ನಿಂದಿಸಿ, ಅಸಭ್ಯವಾಗಿ ವರ್ತಿಸಲು ಪ್ರಾರಂಭಿಸಿದ. ಇದರಿಂದ ಗಾಬರಿಗೊಂಡ ಮಹಿಳೆಯರು ತಕ್ಷಣವೇ ಅಲ್ಲಿಂದ ತೆರಳಿದರು. ಆದರೆ ಮಹಿಳೆಯರಿದ್ದ ಕಾರನ್ನು ಗೊರಗುಂಟೆ ಪಾಳ್ಯದ ವರೆಗೂ  ಹಿಂಬಾಲಿಸಿದ ವ್ಯಕ್ತಿ ಕಾರಿಗೆ ಡಿಕ್ಕಿ ಹೊಡೆಯಲು ಯತ್ನಿಸಿದ್ದಾನೆ. ಮಹಿಳೆ ತನ್ನ ಕಾರನ್ನು ಸ್ಥಳೀಯ ಪೊಲೀಸ್ ಠಾಣೆ ಬಳಿ ನಿಲ್ಲಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ವ್ಯಕ್ತಿ ಪರಾರಿಯಾಗಿದ್ದಾನೆ. ಈ ಘಟನೆ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

"ನಾನು ಸ್ನೇಹಿತರೊಂದಿಗೆ ಮದ್ಯಸೇವಿಸಿದ ನಂತರ ಜಾಲಿ ರೈಡ್ ಗಾಗಿ ಬಂದಿದ್ದೆ" ಎಂದು ಬಂಧಿತ ವ್ಯಕ್ತಿ ಪೊಲೀಸರೆದುರು ಹೇಳಿಕೆ ನೀಡಿದ್ದಾನೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!