ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ಅಪಾರ್ಟ್ ಮೆಂಟ್ ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಆರೋಪ; ಮೂವರ ಬಂಧನ

ಉಲ್ಲಾಳ್ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇರೆಗೆ ಕೇರಳದಿಂದ ಬಂದಿದ್ದ ವ್ಯಕ್ತಿಯೊಬ್ಬರು ಸೇರಿದಂತೆ ಮೂವರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. 

ಮಂಗಳೂರು: ಉಲ್ಲಾಳ್ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇರೆಗೆ ಕೇರಳದಿಂದ ಬಂದಿದ್ದ ವ್ಯಕ್ತಿಯೊಬ್ಬರು ಸೇರಿದಂತೆ ಮೂವರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. 

ನಿದ್ರೆ ಮಾತ್ರೆ ಮತ್ತು ಮದ್ಯ ಕೊಟ್ಟು ತಮ್ಮ ಮಗಳ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ಸಂತ್ರಸ್ತೆಯ ತಾಯಿ ದೂರು ನೀಡಿದ ನಂತರ ಮಂಗಳೂರಿನ ಇಬ್ಬರು ಹಾಗೂ ಕೇರಳದಿಂದ ಬಂದಿದ್ದ ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸುದ್ದಿಗಾರರಿಗೆ ತಿಳಿಸಿದರು.

ಮುಡಿಪುವಿನ ಅಪಾರ್ಟ್ ಮೆಂಟ್ ವೊಂದರ ಬಳಿ ಸೋಮವಾರ ಪರಿಸ್ಥಿತಿ ಬಿಗಡಾಯಿಸಿತ್ತು. ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಅತ್ಯಾಚಾರಕ್ಕೂ ಮುನ್ನ ತನ್ನ ಮಗಳಿಗೆ ನಿದ್ರೆ ಮಾತ್ರೆ ಹಾಗೂ ಮದ್ಯವನ್ನು ನೀಡಲಾಗಿದೆ ಎಂದು ಸಂತ್ರಸ್ತೆ ತಾಯಿ ಆರೋಪಿಸಿದರು. ಸಂತ್ರಸ್ತೆಯನ್ನು ಸಮಾಲೋಚನೆಗಾಗಿ ಸಂಬಂಧಿತ ಇಲಾಖೆ ವಶಕ್ಕೆ ನೀಡಲಾಗಿದೆ ಎಂದು ಅವರು ಹೇಳಿದರು.

ಈ ಅತ್ಯಾಚಾರ ಪ್ರಕರಣದ ಆರೋಪಿಯೊಬ್ಬ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಮತ್ತೊಂದು ಪೊಕ್ಸೊ ಪ್ರಕರಣದಲ್ಲಿಯೂ ಆರೋಪಿತನಾಗಿದ್ದಾನೆ. ಆತನ ವಿರುದ್ಧ ಎರಡು ಪೊಕ್ಸೊ ಕಾಯ್ದೆ, ದರೋಡೆ ಮತ್ತು ಎನ್ ಡಿಪಿಎಸ್ ಕಾಯ್ದೆಯಡಿ ಏಳು ಪ್ರಕರಣಗಳು ದಾಖಲಾಗಿವೆ. 

ಆರೋಪಿಗಳಿಗೂ ತನ್ನ ಮಗಳಿಗೂ ಪರಸ್ಪರ ಗೊತಿತ್ತು. ಅಪಾರ್ಟ್ ಮೆಂಟ್ ಗೆ ಆಕೆಯನ್ನು ಕರೆದೊಯ್ದಗಿನಿಂದಲೂ ಮೂವರಿಂದ ಗ್ಯಾಂಗ್ ರೇಪ್ ನಡೆದಿರುವ ಶಂಕೆಯನ್ನು ಸಂತ್ರಸ್ತೆ ತಾಯಿ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್

'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್

'ಪ್ರೇಮದ ಊರಲಿ' ಚಿತ್ರ ವೀಕ್ಷಣೆಗೆ ಹೋಗಿದ್ದವರಿಗೆ ಶಾಕ್; ಮನೆಯಲ್ಲಿ ಕಳ್ಳ ಲಾಕ್, ಸಿಕ್ಕಿಬಿದ್ದಿದ್ದೇ ರೋಚಕ!

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!