ಸಚಿವ ಆರಗ ಜ್ಞಾನೇಂದ್ರ 
ರಾಜ್ಯ

ಪೊಲೀಸರಿಗೆ 10 ಸಾವಿರ ಮನೆ ನಿರ್ಮಾಣ: ಆರಗ ಜ್ಞಾನೇಂದ್ರ

ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗಾಗಿ 10 ಸಾವಿರ ಮನೆ ನಿರ್ಮಾಣ ಮಾಡಲಾಗುವುದು ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ಬೆಳಗಾವಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗಾಗಿ 10 ಸಾವಿರ ಮನೆ ನಿರ್ಮಾಣ ಮಾಡಲಾಗುವುದು ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ಇಂದು ವಿಧಾನಸಭೆಯಲ್ಲಿ, ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಶಿವಲಿಂಗೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 'ರಾಜ್ಯದ ಪೊಲೀಸರು, ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತೆ ಸೌಲಭ್ಯ ಒದಗಿಸಲು,ರಾಜ್ಯ ಸರಕಾರ ಬದ್ಧವಾಗಿದೆ. ರಾಜ್ಯದಲ್ಲಿ “ಪೊಲೀಸ್-ಗೃಹ ೨೦೨೫’ ಎಂಬ ಯೋಜನೆಯನ್ನು ಸರಿಸುಮಾರು ಹತ್ತು ಸಾವಿರ ವಸತಿ ಗೃಹಗಳನ್ನು, ಪೊಲೀಸ್ ಸಿಬ್ಬಂದಿಗಳಿಗೆ ಇನ್ನೂ ಐದು ವರ್ಷಗಳಲ್ಲಿ ಕಟ್ಟಿಕೊಡಲಾಗುವುದು ಎಂದು ಮಾಹಿತಿ ನೀಡಿದರು.

ಸದಸ್ಯರು ಎತ್ತಿದ, ಶಿಥಿಲಾವಸ್ಥೆಯಲ್ಲಿರುವ ಗಂಡಸಿ ಪೊಲೀಸ್ ಠಾಣೆ ಕುರಿತ ಪ್ರಶ್ನೆಗೆ ಸಚಿವರು “ರಾಜ್ಯದಲ್ಲಿ ಸುಮಾರು ಒಂದು ನೂರು ಪೊಲೀಸ್ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದ್ದು, ಹಳೆಯ ಹಾಗೂ ಶಿಥಿಲಗೊಂಡಿರುವ ಕಟ್ಟಡಗಳನ್ನು ದುರಸ್ಥಿ ಗೊಳಿಸಲಾಗುವುದೂ” ಎಂದು ಸಚಿವರು ತಿಳಿಸಿದರು.

“ಪೊಲೀಸ್ ಸಿಬ್ಬಂದಿಗಳಿಗೆ, ಕರ್ತವ್ಯ ನಿರ್ವಹಿಸಲು ಉತ್ತಮ ವಾತಾವರಣ ಹಾಗೂ ವಾಸಿಸಲು ಸುಸಜ್ಜಿತ ಮನೆಯನ್ನು ಒದಗಿಸುತ್ತೇವೆ” ಎಂದು ಸಚಿವರು ಸದನಕ್ಕೆ ತಿಳಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ