ಮಂಗಳೂರಿನಲ್ಲಿ ಪೊಲೀಸ್ ಭದ್ರತೆ 
ರಾಜ್ಯ

ನಾಯಕರ ಮೇಲೆ ಲಾಠಿ ಚಾರ್ಜ್: ಪಿಎಫ್ಐ-ಎಸ್ ಡಿಪಿಐ ಪ್ರತಿಭಟನೆ, 9 ಪೊಲೀಸರಿಗೆ ಗಾಯ, 3 ದಿನ ನಿಷೇಧಾಜ್ಞೆ ಜಾರಿ

ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕಾರ್ಯಕರ್ತರ ಮೇಲೆ ಉಪ್ಪಿನಂಗಡಿ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಪಿಎಫ್ಐ-ಎಸ್ ಡಿಪಿಐ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ವೇಳೆ 9 ಪೊಲೀಸರಿಗೆ ಗಾಯಗಳಾಗಿವೆ. ಅಲ್ಲದೆ ಸ್ಥಳದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮಂಗಳೂರು: ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕಾರ್ಯಕರ್ತರ ಮೇಲೆ ಉಪ್ಪಿನಂಗಡಿ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಪಿಎಫ್ಐ-ಎಸ್ ಡಿಪಿಐ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ವೇಳೆ 9 ಪೊಲೀಸರಿಗೆ ಗಾಯಗಳಾಗಿವೆ. ಅಲ್ಲದೆ ಸ್ಥಳದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಉಪ್ಪಿನಂಗಡಿಯಲ್ಲಿ ಪಿಎಫ್‌ಐ-ಎಸ್‌ಡಿಪಿಐ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಶುಕ್ರವಾರ ಮಧ್ಯರಾತ್ರಿಯವರೆಗೆ ದಕ್ಷಿಣ ಕನ್ನಡದ ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳಲ್ಲಿ ಮೂರು ದಿನಗಳ ಕಾಲ ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮಂಗಳವಾರ ಉಪ್ಪಿನಂಗಡಿ ಪೊಲೀಸರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪಿಎಫ್‌ಐ-ಎಸ್‌ಡಿಪಿಐ ಕಾರ್ಯಕರ್ತರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡು ಹೋಗಿದ್ದರು. ಈ ಸುದ್ದಿ ಹರಡುತ್ತಿದ್ದಂತೆ ಪಕ್ಷದ ನೂರಾರು ಕಾರ್ಯಕರ್ತರು ಪೊಲೀಸ್ ಠಾಣೆ ಬಳಿ ಜಮಾಯಿಸಿ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು. ಸ್ವಲ್ಪ ಸಮಯದ ನಂತರ, ಪೊಲೀಸರು ಬಂಧಿತ ಮೂವರಲ್ಲಿ ಒಬ್ಬನನ್ನು ವಿಚಾರಣೆಯ ನಂತರ ಬಿಡುಗಡೆ ಮಾಡಿದ್ದಾರೆ ಎನ್ನಲಾಗಿದೆ.

ವ್ಯಕ್ತಿಯ ಬಿಡುಗಡೆಯ ನಂತರ ಪೊಲೀಸ್ ಠಾಣೆಯಿಂದ ಹೊರಬಂದ ಪ್ರತಿಭಟನಾಕಾರರು ಸ್ವಲ್ಪ ಸಮಯದ ನಂತರ ಮತ್ತೆ ಬಂದು ಇತರೆ ಇಬ್ಬರನ್ನೂ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು ಎಂದು ಎಸ್ಪಿ ರಿಷಿಕೇಶ್ ಸೋನಾವಾನೆ ಹೇಳಿದರು. 

ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪೊಲೀಸರ ವಿರುದ್ಧ ಘೋಷಣೆ ಕೂಗಿದರು. ಮಾರಕಾಯುಧಗಳೊಂದಿಗೆ ಠಾಣೆಗೆ ನುಗ್ಗಲು ಯತ್ನಿಸಿದಾಗ ಮಹಿಳಾ ಪಿಎಸ್‌ಐ ಓಮನಾ ಹಾಗೂ ಇತರೆ ಸಿಬ್ಬಂದಿ ತಡೆಯಲು ಯತ್ನಿಸಿದರಾದರೂ ಪಿಎಫ್‌ಐ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಪರಿಸ್ಥಿತಿ ಹತೋಟಿ ಮೀರುತ್ತಿರುವುದನ್ನು ಅರಿತ ಪೊಲೀಸರು ಗುಂಪನ್ನು ಚದುರಿಸಲು ಯತ್ನಿಸಿದರು. ಆಗ ಆಂಬ್ಯುಲೆನ್ಸ್‌ನಲ್ಲಿ ಕೊಂಡೊಯ್ದಿದ್ದ ಚೂಪಾದ ಆಯುಧಗಳು ಮತ್ತು ಸೋಡಾ ಬಾಟಲ್‌ಗಳಿಂದ ಪೊಲೀಸರ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಈ ವೇಳೆ ಡಿವೈಎಸ್ಪಿ ಶ್ರೇಣಿಯ ಅಧಿಕಾರಿ ಸೇರಿದಂತೆ ಒಂಬತ್ತು ಪೊಲೀಸರು ಗಾಯಗೊಂಡಿದ್ದಾರೆ. ಕಲ್ಲು ತೂರಾಟದಲ್ಲಿ ಬಂಟ್ವಾಳ ಪಿಎಸ್‌ಐ ಪ್ರಸನ್ನ ಕುಮಾರ್ ಅವರ ಬಲಗೈಗೆ ಚಾಕುವಿನಿಂದ ಇರಿದಿದ್ದು, ಪುತ್ತೂರು ಡಿವೈಎಸ್ಪಿ ಗಣ ಪಿ ಕುಮಾರ್ ಅವರ ಎಡಗೈಗೆ ಗಾಯವಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. 

ಪೊಲೀಸರು ಲಾಠಿ ಚಾರ್ಜ್‌ಗೆ ಮುಂದಾದಾಗ, ಜನಸಮೂಹವು ಭಯಭೀತರಾಗಿ ಓಡಿ ಹತ್ತಿರದ ಮಸೀದಿಯಲ್ಲಿ ಆಶ್ರಯ ಪಡೆದರು ಅಲ್ಲಿಂದ ಅವರು ಪೊಲೀಸರ ಮೇಲೆ ಕಲ್ಲು ಮತ್ತು ಬಾಟಲಿಗಳನ್ನು ಎಸೆಯುವುದನ್ನು ಮುಂದುವರೆಸಿದರು. ಘಟನೆಯಲ್ಲಿ ಪೊಲೀಸರಿಗೆ ಸೇರಿದ ಹಲವಾರು ವಾಹನಗಳು ಮತ್ತು ಪೊಲೀಸ್ ಠಾಣೆಯ ಸಾರ್ವಜನಿಕರು ಮತ್ತು ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ಅವರು ಹೇಳಿದ್ದಾರೆ.

ಏತನ್ಮಧ್ಯೆ, ಎಸ್‌ಡಿಪಿಐ ದ.ಕ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಹೇಳಿಕೆಯಲ್ಲಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಪಿಎಸ್‌ಐ-ಎಸ್‌ಡಿಪಿಐ ಕಾರ್ಯಕರ್ತರ ಮೇಲೆ ಪೊಲೀಸರೇ ಲಾಠಿ ಚಾರ್ಜ್ ಮಾಡುವ ಮೂಲಕ ಉದ್ವಿಗ್ನ ಪರಿಸ್ಥಿತಿಯನ್ನು ಉಂಟುಮಾಡಿದರು ಮತ್ತು ಘಟನೆಯ ಕುರಿತು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳಿಂದ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ಸಂಪುಟ ವಿಸ್ತರಣೆ ಮುನಿಸು ಕೊನೆಗೂ ಶಮನ: ರಾಜೀನಾಮೆ ವಾಪಸ್ ಪಡೆದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್

ರಾಜ್‌ಗಢದಲ್ಲಿ ಭಾರೀ ಮಳೆ: 11 ಪ್ರಯಾಣಿಕರ ಸಮೇತ ಚರಂಡಿಯಲ್ಲಿ ಕೊಚ್ಚಿ ಹೋದ ವ್ಯಾನ್; 9 ಮಂದಿ ಸಾವು!

ದೇಶದ ಅತ್ಯಂತ ದುಬಾರಿ ಪೆಂಟ್‌ಹೌಸ್! ಈ ಐಷಾರಾಮಿ ಮನೆ 271 ಕೋಟಿಗೆ ಮಾರಾಟ!