ಎಚ್.ಡಿ ಕುಮಾರಸ್ವಾಮಿ 
ರಾಜ್ಯ

ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ; ಜನ್ಮದಿನದಂದು ಹಾರ-ತುರಾಯಿ ಹಾಕಿ, ಕೇಕ್‌ ಕತ್ತರಿಸಿ ಸಂಭ್ರಮ ಬೇಡ: ಎಚ್ ಡಿಕೆ

ಡಿಸೆಂಬರ್ 16ರಂದು ನನ್ನ ಜನ್ಮದಿನ. ಕಳೆದೆರಡು ವರ್ಷಗಳಿಂದ ಕೋವಿಡ್‌-19 ಕಾರಣಕ್ಕೆ ನಾವೆಲ್ಲರೂ ಸಂಕಷ್ಟದಲ್ಲಿದ್ದೇವೆ. ಸಾವು-ನೋವು ಕಂಡಿದ್ದೇವೆ. ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದೇವೆ.

ಬೆಂಗಳೂರು : ಕೋವಿಡ್ ಹಿನ್ನೆಲೆಯಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದಾರೆ. ಹೀಗಾಗಿ ವಿಜೃಂಭಣೆಯಿಂದ ನನ್ನ ಹುಟ್ಟುಹಬ್ಬ ಮಾಡುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಡಿಸೆಂಬರ್ 16ರಂದು ನನ್ನ ಜನ್ಮದಿನ. ಕಳೆದೆರಡು ವರ್ಷಗಳಿಂದ ಕೋವಿಡ್‌-19 ಕಾರಣಕ್ಕೆ ನಾವೆಲ್ಲರೂ ಸಂಕಷ್ಟದಲ್ಲಿದ್ದೇವೆ. ಸಾವು-ನೋವು ಕಂಡಿದ್ದೇವೆ. ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದೇವೆ. ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಈ ಕಷ್ಟದ ಸಮಯದಲ್ಲಿ ಅದ್ಧೂರಿ ಜನ್ಮದಿನ ಆಚರಣೆ ನನ್ನ ಮನಸ್ಸಿಗೆ ಒಪ್ಪುವ ವಿಚಾರವಲ್ಲ. ಹಾರ-ತುರಾಯಿ ಹಾಕಿ, ಕೇಕ್‌ ಕತ್ತರಿಸಿ ಸಂಭ್ರಮಿಸುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

ನನ್ನ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು, ಹಿತೈಷಿಗಳಲ್ಲಿ ನನ್ನದೊಂದು ಕಳಕಳಿಯ ಮನವಿ. ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗುವ ಮೂಲಕ ನನ್ನ ಜನ್ಮದಿನಕ್ಕೆ ಸಾರ್ಥಕತೆ ತನ್ನಿ. ಅದ್ಧೂರಿ ಹುಟ್ಟುಹಬ್ಬ ನನಗೆ ಇಷ್ಟವಿಲ್ಲ. ಆ ಅದ್ಧೂರಿತನದಲ್ಲಿ ಕಂಗೆಟ್ಟಿರುವ ಜನರನ್ನು ಅಣಕಿಸುವುದು ಬೇಡ. ನೀವೆಲ್ಲರೂ ಇದ್ದಲ್ಲಿಂದಲೇ ನನ್ನನ್ನು ಆಶೀರ್ವದಿಸಿ, ಹಾರೈಸಿ. ಹೊಸ ಚೈತನ್ಯ ಮತ್ತು ದೃಢ ಸಂಕಲ್ಪದೊಂದಿಗೆ ಪಕ್ಷವನ್ನು ಕಟ್ಟೋಣ. ಸವಾಲುಗಳನ್ನು ಮೆಟ್ಟಿ ನಿಲ್ಲೋಣ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT