ಗೌರವ್ ಗುಪ್ತಾ 
ರಾಜ್ಯ

ವಿದೇಶದಿಂದ ಬಂದವರನ್ನು ಸಾಂಸ್ಥಿಕ ಕ್ವಾರಂಟೈನ್'ಗೊಳಪಡಿಸುವುದು ಅಗತ್ಯವಿದೆ: ಗೌರವ್ ಗುಪ್ತಾ

ಹೈರಿಸ್ಕ್ ದೇಶಗಳು ಸೇರಿದಂತೆ ವಿದೇಶಗಳಿಂದ ಬಂದವರ ಸಾಂಸ್ಥಿಕ ಕ್ವಾರಂಟೈನ್ ಗೊಳಪಡಿಸುವುದು ಅಗತ್ಯವಿದೆ ಎಂದು ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ.

ಬೆಂಗಳೂರು: ಹೈರಿಸ್ಕ್ ದೇಶಗಳು ಸೇರಿದಂತೆ ವಿದೇಶಗಳಿಂದ ಬಂದವರ ಸಾಂಸ್ಥಿಕ ಕ್ವಾರಂಟೈನ್ ಗೊಳಪಡಿಸುವುದು ಅಗತ್ಯವಿದೆ ಎಂದು ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಓಮಿಕ್ರಾನ್ ವೈರಾಣು ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟುನಿಟ್ಟಿನ ಕ್ರಮಕ್ಕೆ ತೀರ್ಮಾನ ಮಾಡಲಾಗಿದೆ. ಹೈರಿಸ್ಕ್ ದೇಶಗಳಿಂದ ಬರುವವರ ಮೇಲೆ ನಿಗಾವಹಿಸಲಾಗಿದ್ದು, ಈ ಹಿಂದಿನಂತೆ ಸಾಂಸ್ಥಿಕ ಕ್ವಾರಂಟೈನ್ ಪದ್ಧತಿ ಜಾರಿ ಮಾಡುವ ಕುರಿತು ಮಾತುಕತೆ ನಡೆಯುತ್ತಿದೆ ಎಂದು ಹೇಳಿದರು.

ಪಾಲಿಕೆ ವ್ಯಾಪ್ತಿಯ ಸದ್ಯ 300 ಮಂದಿ ಕೋವಿಡ್ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 3 ಸಾವಿರ ಹಾಸಿಗೆಗಳನ್ನು ಕೋವಿಡ್ ಹಾಗೂ ಓಮಿಕ್ರಾನ್ ಸೋಂಕಿತರ ಚಿಕಿತ್ಸೆಗಾಗಿ ಮೀಸಲಿಟ್ಟಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚು ಜನರು ದಾಖಲಾದರೆ ಇನ್ನಷ್ಟು ಹಾಸಿಗೆಗಳನ್ನು ಮೀಸಲಿಡುತ್ತೇನೆಂದು ತಿಳಿಸಿದರು.

ಓಮಿಕ್ರಾನ್ ಬಹಳ ವೇಗವಾಗಿ ಹರಡುತ್ತಿದೆ ಎಂಬ ವಿಚಾರ ತಿಳಿದ್ದು ಮುಂದಿನ ದಿನಗಳಲ್ಲಿ ಬಹುತೇಕ ಪ್ರಕರಣ ಡೆಲ್ಟಾ ಬದಲು ಓಮಿಕ್ರಾನ್ ಬರಬಹುದು ಎಂದು ಯುಕೆ ಅಂದಾಜಿಸಿದೆ. ಈ ಹಿನ್ನೆಲೆಯಲ್ಲಿ ಓಮಿಕ್ರಾನ್ ಸೋಂಕಿತರ ಪತ್ತೆಯಾದರ ಅವರ ಚಿಕಿತ್ಸೆಗೆ ಪಾಲಿಕೆ ವ್ಯಾಪ್ತಿಯಲ್ಲಿ ಇರುವ ಸಿದ್ಧತೆ ಮುಂದುವರೆಸುತ್ತೇವೆ. ಹೊರ ದೇಶದಿಂದ ಬರುವ ಎಲ್ಲರನ್ನೂ, ಅದರಲ್ಲಿಯೂ ಹೈರಿಸ್ಕ್ ಇರುವ ದೇಶಗಳಿಂದ ಬರುವ ಪ್ರಯಾಣಿಕರನ್ನು ಪರೀಕ್ಷೆಗೊಳಪಡಿಸುತ್ತೇವೆ. ನಗರದಲ್ಲಿ ಸದ್ಯ ಕೋವಿಡ್ ಪ್ರಕರಣದಲ್ಲಿ ಏರಿಕೆಯಾಗಿಲ್ಲ. ಆದರೆ, ಮುಂದಿನ ದಿನಗಳಲ್ಲಿ ಏರಿಕೆಯಾಗುವ ಸಾಧ್ಯತೆಯಿದ್ದು, ಮುಂಜಾಗ್ರತೆ ಕೈಗೊಂಡಿದ್ದೇವೆ ಎಂದು ಹೇಳಿದರು.

ಸೋಂಕಿನ ಲಕ್ಷಣ ಕಂಡು ಬರುವ ಪ್ರತಿಯೊಬ್ಬರು ತಪ್ಪದೇ ಕೋವಿಡ್ ಪರೀಕ್ಷೆ ಮಾಡಿಕೊಳ್ಳಬೇಕು. ಈ ನಿಟ್ಟನಲ್ಲಿ ಬಿಬಿಎಂಪಿ ಪರೀಕ್ಷೆ ಸಂಖ್ಯೆ ಹೆಚ್ಚಿಸಿದೆ. ಜೊತೆಗೆ ಲಸಿಕೆ ನೀಡುವುದನ್ನು ಕೂಡ ಜಾಸ್ತಿ ಮಾಡಲಾಗಿದೆ. ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT