ರಾಜ್ಯ

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ, ಇಂದು ಇಬ್ಬರು ಸಾವು, ಬೆಂಗಳೂರಿನಲ್ಲಿ 197 ಸೇರಿ 303 ಮಂದಿಗೆ ಪಾಸಿಟಿವ್

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 303 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,01554ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38279ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 197 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,59,585ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 322 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,56,088ಕ್ಕೆ ಏರಿಕೆಯಾಗಿದೆ. ಇನ್ನು 7158 ಸಕ್ರಿಯ ಪ್ರಕರಣಗಳಿವೆ.

SCROLL FOR NEXT