ಸದನದಲ್ಲಿ ಶಾಸಕ ರಮೇಶ್ ಕುಮಾರ್ 
ರಾಜ್ಯ

ಅತ್ಯಾಚಾರ ತಡೆಯಲು ಸಾಧ್ಯವಾಗದಿದ್ದರೆ ಎಂಜಾಯ್ ಮಾಡಿ: ರಮೇಶ್ ಕುಮಾರ್

ಅತ್ಯಾಚಾರ ಆಗುವಾಗ ತಡೆಯಲು ಸಾಧ್ಯವಾಗದಿದ್ದರೆ ಎಂಜಾಯ್ ಮಾಡಿಬಿಡಬೇಕು ಎಂದು ಕಾಂಗ್ರೆಸ್ ಶಾಸಕ ಕೆ.ಆರ್.ರಮೇಶ್​ ಕುಮಾರ್ ಹೇಳಿದ್ದಾರೆ.

ಬೆಳಗಾವಿ: ಅತ್ಯಾಚಾರ ಆಗುವಾಗ ತಡೆಯಲು ಸಾಧ್ಯವಾಗದಿದ್ದರೆ ಎಂಜಾಯ್ ಮಾಡಿಬಿಡಬೇಕು ಎಂದು ಕಾಂಗ್ರೆಸ್ ಶಾಸಕ ಕೆ.ಆರ್.ರಮೇಶ್​ ಕುಮಾರ್ ಹೇಳಿದ್ದಾರೆ.

ರೈತರ ಬೆಳೆ ವಿಮೆ ಚರ್ಚೆಯಲ್ಲಿ ವಿಧಾನಸಭಾ ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್ ಈ ಹೇಳಿಕೆ ನೀಡಿದ್ದು, ಮಹಿಳೆ ಅತ್ಯಾಚಾರದಿಂದ ಪಾರಾಗಲು ಸಾಧ್ಯವಿಲ್ಲ ಎಂದು ಗೊತ್ತಾದಾಗ ಆ ಪರಿಸ್ಥಿತಿಯನ್ನು ಸಂತಸದಿಂದ ಅನುಭವಿಸಬೇಕು ಎಂದು ಹೇಳಿದರು. 

ರೈತರ ಬೆಳೆ ಹಾನಿ ಪರಿಹಾರ ಕುರಿತು ಮಹತ್ವಪೂರ್ಣ ಚರ್ಚೆಯಲ್ಲಿ ಶಾಸಕರು ಮಗ್ನರಾಗಿದ್ದರು. ಅಲ್ಲದೆ, ರೈತರ ಸಂಕಷ್ಟ ಕುರಿತು ಮಾತನಾಡಲು ತಮಗೆ ಅವಕಾಶ ಕೊಡಿ ಎಂದು ಎಲ್ಲ ಶಾಸಕರು ಸಭಾಧ್ಯಕ್ಷರ ಮುಂದೆ ಬೇಡಿಕೆ ಇಡುತ್ತಿದ್ದರು. ರಾಜ್ಯದ ಮಹತ್ವದ ವಿಚಾರದಲ್ಲಿ ಚರ್ಚೆ ನಡೆಯುತ್ತಿದ್ದಾಗ ನಮ್ಗೆ ಮಾತನಾಡಲು ಅವಕಾಶ ಕೊಡಿ ಎಂದು ಶಾಸಕರು ದುಂಬಾಲು ಬಿದ್ದಾಗ ಈಗ ಚರ್ಚೆ ಸಾಕು, ಕಂದಾಯ ಸಚಿವರು ಉತ್ತರಿಸುತ್ತಾರೆ ಎಂದು ಹೇಳಿದರು. ಆದರೆ, ಮಾತನಾಡಲು ಅವಕಾಶ ಸಿಗದ ಶಾಸಕರು ಸುಮ್ಮನಾಗಲಿಲ್ಲ. ಮಾತನಾಡಲು ಅವಕಾಶ ಕೊಡಬೇಕೆಂದು ಪಟ್ಟು ಹಿಡಿದರು. ಈ ವೇಳೆ ಚರ್ಚೆ ಮುಂದುವರಿಸಿ ಎಂದು ಸಭಾಧ್ಯಕ್ಷ ಕಾಗೇರಿ, ವಲ್ಲದ ಮನಸಿನಿಂದ ಒಪ್ಪಿಕೊಂಡರು.

ಆಗ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಹಿಳೆ ಅತ್ಯಾಚಾರದಿಂದ ಪಾರಾಗಲು ಸಾಧ್ಯವಿಲ್ಲ ಎಂದು ಗೊತ್ತಾದಾಗ ಆ ಪರಿಸ್ಥಿತಿಯನ್ನು ಸಂತಸದಿಂದ ಅನುಭವಿಸಬೇಕು (“Actually there is a saying, when rape is inevitable laydown and enjoy it. That’s the exactly the position in to which you are”) ಎಂಬ ಮಾತನ್ನು ಹೇಳಿಬಿಟ್ಟರು. ವಿಧಾನಸೌಧ ಅಂದರೆ ದೇವಾಲಯ ಇದ್ದಂತೆ.. ಇಲ್ಲಿ ಮಹಿಳೆಯರ ಬಗ್ಗೆ ಕೇವಲವಾಗಿ ಮಾತನಾಡಿರುವುದು ಎಷ್ಟರಮಟ್ಟಿಗೆ ಸರಿ ಎಂದು ಮಹಿಳೆಯರು ಪ್ರಶ್ನೆ ಮಾಡುತ್ತಿದ್ದಾರೆ. 

ನಕ್ಕು ಸುಮ್ಮನಾದ ಸ್ಪೀಕರ್ ಕಾಗೇರಿ
ಇನ್ನು ರಮೇಶ್ ಕುಮಾರ್ ಅವರ ಈ ಹೇಳಿಕೆಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಕ್ಕು ಸುಮ್ಮನಾದರು. ಸದನದಲ್ಲಿದ್ದ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ಈ ಹೇಳಿಕೆ ಸಹಜ ವಿದ್ಯಮಾನ ಎನ್ನುವಂತೆ ವರ್ತಿಸಿದರು. ಸದನದಲ್ಲಿ ಅತಿವೃಷ್ಟಿ ಕುರಿತು ನಿಯಮ 69ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದಾಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಜೆ 5ರ ವೇಳೆ ಚರ್ಚೆಗೆ ಹೆಚ್ಚಿನ ಸಮಯಬೇಕು ಎಂದು ಸದಸ್ಯರು ವಿನಂತಿಸಿದ್ದರು. ಆಗ ಸಂಜೆ 6 ಗಂಟೆಯವರೆಗೆ ಸಮಯ ಕೊಡುತ್ತೇನೆ ಎಂದು ಸ್ಪೀಕರ್‌ ಹೇಳಿದ್ದರು.

‘ಎಲ್ಲರೂ ಮಾತನಾಡಬೇಕು ಎನ್ನುತ್ತಾರೆ. ನನಗೆ ಸದನದ ಬ್ಯುಸಿನೆಸ್ ನಡೆಯುವುದು ಮುಖ್ಯ. ಇದು ನಿಮ್ಮದೇ ಸದನ, ಈಗ ನನ್ನ ಪರಿಸ್ಥಿತಿ ಹೇಗಾಗಿದೆ ಅಂದರೆ ಲೆಟ್ಸ್ ಎಂಜಾಯ್​ದ ಸಿಚುಯೇಷನ್ ಅನ್ನೋ ರೀತಿ ಆಗಿದೆ ರಮೇಶ್ ಕುಮಾರ್ ಅವರೇ’ ಎಂದು ಹೇಳಿದರು. ತಮ್ಮ ಹೆಸರು ಪ್ರಸ್ತಾಪವಾಗಿದ್ದಕ್ಕೆ ಎದ್ದುನಿಂತು ಪ್ರತಿಕ್ರಿಯಿಸಿದ ರಮೇಶ್​ಕುಮಾರ್, ರೇಪ್ ಆದಾಗ ತಡೆಯಲು ಸಾಧ್ಯವಾಗದಿದ್ರೆ ಮಲಗಿ ಎಂಜಾಯ್ ಮಾಡಿಬಿಡಬೇಕು ಎಂದರು. ಶಾಸಕ ರಮೇಶ್ ಕುಮಾರ್ ಮಾತಿಗೆ ಸ್ಪೀಕರ್ ಕಾಗೇರಿ ನಕ್ಕರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT