ಮುರುಗೇಶ್ ನಿರಾಣಿ 
ರಾಜ್ಯ

ಕೈಗಾರಿಕೆಗಳಿಂದ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗ: ಸಚಿವ ಮುರುಗೇಶ್ ನಿರಾಣಿ

ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯಮಗಳಲ್ಲಿ ಈಗಾಗಲೇ ಡಾ.ಸರೋಜಿನಿ ಮಹಿಷಿ ವರದಿ ಅನುಸಾರ ಉದ್ಯೋಗಗಳನ್ನು ಒದಗಿಸಲಾಗುತ್ತಿದೆ. ಉದ್ಯೋಗ ದೊರೆಯದ ಅಭ್ಯರ್ಥಿಗಳ ಪಟ್ಟಿ ನೀಡಿದರೆ ವಿವಿಧ...

ಬೆಳಗಾವಿ: ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯಮಗಳಲ್ಲಿ ಈಗಾಗಲೇ ಡಾ.ಸರೋಜಿನಿ ಮಹಿಷಿ ವರದಿ ಅನುಸಾರ ಉದ್ಯೋಗಗಳನ್ನು ಒದಗಿಸಲಾಗುತ್ತಿದೆ. ಉದ್ಯೋಗ ದೊರೆಯದ ಅಭ್ಯರ್ಥಿಗಳ ಪಟ್ಟಿ ನೀಡಿದರೆ ವಿವಿಧ ಕೈಗಾರಿಕೆಗಳಲ್ಲಿ ಉದ್ಯೋಗ ನೀಡಲು ಸೂಚಿಸಿ ಶಿಫಾರಸ್ಸು ಮಾಡಲಾಗುವುದು ಎಂದು ಬೃಹತ್ ಮತ್ತು ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರು ಶುಕ್ರವಾರ ಹೇಳಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿಂದು ಧಾರವಾಡ ಶಾಸಕ ಅಮೃತ ಅಯ್ಯಪ್ಪ ದೇಸಾಯಿ ಅವರು ಧಾರವಾಡ ತಾಲೂಕಿನ ಬೇಲೂರು ಕೈಗಾರಿಕಾ ಪ್ರದೇಶವನ್ನು 1984ರಲ್ಲಿ ಅಂದಿನ ಸಚಿವ ಎಸ್.ಆರ್.ಬೊಮ್ಮಾಯಿ ಅವರು ಮಹತ್ವಾಕಾಂಕ್ಷೆಯೊಂದಿಗೆ ಸ್ಥಾಪಿಸಿದ್ದಾರೆ. ಇಲ್ಲಿ ಭೂಮಿ ಕಳೆದುಕೊಂಡಿರುವ ರೈತರಿಗೆ ನೀಡಿರುವ ಪರಿಹಾರ ಹಾಗೂ ಅವರ ಮಕ್ಕಳಿಗೆ ನೀಡಿರುವ ಉದ್ಯೋಗದ ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸುತ್ತಾ ಈ ಮಾಹಿತಿ ನೀಡಿದರು.

ಧಾರವಾಡ ಬಳಿಯ ಬೇಲೂರು ಕೈಗಾರಿಕೆ ಪ್ರದೇಶ ಸ್ಥಾಪನೆಗೆ 1984 ಬೇಲೂರಿನಲ್ಲಿ 497 ಎಕರೆ, 1985 ರಲ್ಲಿ ಮುಮ್ಮಿಗಟ್ಟಿಯಲ್ಲಿ 891 ಎಕರೆ, ನೀರಲಕಟ್ಟಿಯಲ್ಲಿ 116 ಹಾಗೂ ಗುಗ್ಗರಕಟ್ಟಿಯಲ್ಲಿ 488 ಎಕರೆ ಸೇರಿ ಒಟ್ಟು 1992 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು, ಪ್ರತಿ ಎಕರೆ ಖುಷ್ಕಿ ಭೂಮಿಗೆ ತಲಾ 12 ಸಾವಿರ, ನೀರಾವರಿ ಭೂಮಿಗೆ ತಲಾ 15 ಸಾವಿರ ರೂ.ಗಳಿಂದ 18 ಸಾವಿರ ರೂ.ಗಳವರೆಗೆ ಪರಿಹಾರ ಒದಗಿಸಲಾಗಿದೆ. ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಒಟ್ಟು 1614 ಉದ್ಯೋಗಗಳನ್ನು ನೀಡಲಾಗಿದೆ. ಇವರಲ್ಲಿ 1538 ಜನ ಸ್ಥಳೀಯರಾಗಿದ್ದಾರೆ. ಭೂಮಿ ಕಳೆದುಕೊಂಡ 76 ಜನರು ಇದ್ದಾರೆ ಎಂದು ಸಚಿವ ಮುರುಗೇಶ ನಿರಾಣಿ ವಿವರಿಸಿದರು.

ಪ್ರಸ್ತುತ ಬೇಲೂರು ಕೈಗಾರಿಕಾ ಪ್ರದೇಶಕ್ಕೆ ಕೋಟೂರು ಮತ್ತು ಬೇಲೂರು ಗ್ರಾಮಗಳಲ್ಲಿ 594 ಎಕರೆ 34 ಗುಂಟೆ ಜಮೀನು ಭೂಸ್ವಾಧೀನ ಪಡಿಸಿಕೊಳ್ಳಲು 2016 ರ ಫೆಬ್ರವರಿ 18 ರಂದು ಅಧಿಸೂಚನೆ ಹೊರಡಿಸಲಾಗಿದೆ. ಪ್ರತಿ ಎಕರೆಗೆ 30 ಲಕ್ಷ ರೂ.ಗಳಂತೆ ಈವರೆಗೆ 521 ಎಕರೆ ಜಮೀನಿಗೆ ಪರಿಹಾರ ಪಾವತಿಸಲಾಗಿದೆ. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಹಂಚಿಕೆದಾರರೊಂದಿಗೆ ಮಾಡಿಕೊಳ್ಳುವ ಗುತ್ತಿಗೆ ಕರಾರು ಪತ್ರದಲ್ಲಿ ಸರ್ಕಾರದ ಕೈಗಾರಿಕಾ ನೀತಿಯನುಸಾರ ಉದ್ಯೋಗ ಕಲ್ಪಿಸಬೇಕೆಂಬ ಷರತ್ತನ್ನು ವಿಧಿಸಲಾಗಿದೆ. ಜಮೀನು ಕಳೆದುಕೊಂಡ ಕುಟುಂಬದ ಒಬ್ಬ ಸದಸ್ಯನಿಗೆ ಉದ್ಯೋಗವಕಾಶ ಕಲ್ಪಿಸಬೇಕೆಂದು ಕರಾರಿನಲ್ಲಿ ತಿಳಿಸಲಾಗಿರುತ್ತದೆ ಎಂದು ಹೇಳಿದರು.

ಉದ್ಯೋಗದ ನಿರೀಕ್ಷೆಯಲ್ಲಿರುವ ರೈತರ ಮಕ್ಕಳ ವಿವರಗಳನ್ನು ನೀಡಿದರೆ ಬೇಲೂರು ಹಾಗೂ ಇತರ ಕೈಗಾರಿಕಾ ಪ್ರದೇಶಗಳಲ್ಲಿ ಉದ್ಯೋಗ ಒದಗಿಸಲು ಕೈಗಾರಿಕಾ ಸಂಸ್ಥೆಗಳಿಗೆ ಸೂಚಿಸಲಾಗುವುದು ಎಂದು ಸಚಿವ ಮುರುಗೇಶ ನಿರಾಣಿ ಪುನರುಚ್ಚರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT