ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾದಿಂದ ಮೂವರು ಸಾವು, ಬೆಂಗಳೂರಿನಲ್ಲಿ 153 ಸೇರಿ 238 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 238 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,01792ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 238 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,01792ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಮೂವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38282ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 153 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,59,738ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 317 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,56,405ಕ್ಕೆ ಏರಿಕೆಯಾಗಿದೆ. ಇನ್ನು 7076 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT