ನಾರಾಯಣ ಗೌಡ 
ರಾಜ್ಯ

ಕೊಡಗಿನಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆ: ಸಚಿವ ನಾರಾಯಣಗೌಡ

ಕ್ರೀಡಾಕಲಿಗಳ ತವರು ಎಂದೇ ಖ್ಯಾತಿ ಪಡೆದಿರುವ ಕೊಡಗು ಜಿಲ್ಲೆಯಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಬೇಕೆಂಬ ಬೇಡಿಕೆ ರಾಜ್ಯ ಸರ್ಕಾರದ ಗಮನಕ್ಕೆ ಬಂದಿದ್ದು, ಶೀಘ್ರ ಈ ಕುರಿತು ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಯುವಸಬಲೀಕರಣ...

ಬೆಳಗಾವಿ: ಕ್ರೀಡಾಕಲಿಗಳ ತವರು ಎಂದೇ ಖ್ಯಾತಿ ಪಡೆದಿರುವ ಕೊಡಗು ಜಿಲ್ಲೆಯಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಬೇಕೆಂಬ ಬೇಡಿಕೆ ರಾಜ್ಯ ಸರ್ಕಾರದ ಗಮನಕ್ಕೆ ಬಂದಿದ್ದು, ಶೀಘ್ರ ಈ ಕುರಿತು ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಶುಕ್ರವಾರ ವಿಧಾನ ಪರಿಷತ್‍ ಗೆ ತಿಳಿಸಿದರು.

ಸದಸ್ಯೆ ವೀಣಾ ಅಚ್ಚಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ ತಿಂಗಳ ಕೊನೆಯ ವಾರದಲ್ಲಿ ಕೊಡಗು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕ್ರೀಡಾಂಗಣ ಸಮಿತಿ ಸಭೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸುವುದಕ್ಕೆ ಸಂಬಂಧಿಸಿದಂತೆ ಚರ್ಚಿಸಲಾಗಿದೆ. ಈ ಬಗ್ಗೆ ವಿವರವಾದ ಪ್ರಸ್ತಾವನೆ ಸ್ವೀಕರಿಸಿದ ನಂತರ ಸಮಾಲೋಚನೆ ನಡೆಸಲಾಗುವುದು ಎಂದರು.

ಕೊಡಗು ಜಿಲ್ಲೆಯಲ್ಲಿ ಕ್ರೀಡೆಗಳಿಗೆ ಉತ್ತೇಜನ ನೀಡುವ ಸಲುವಾಗಿ 218.33ಲಕ್ಷ ರೂ.ಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ನಾರಾಯಣಗೌಡ ಅವರು ತಿಳಿಸಿದರು.

ಸದಸ್ಯೆ ವೀಣಾ ಅವರು ಪೊನ್ನಂಪೇಟೆ-ಸೋಮವಾರ ಪೇಟೆ ಮಧ್ಯಭಾಗದಲ್ಲಿ ಸರಕಾರಕ್ಕೆ ಸೇರಿದ 100 ಎಕರೆ ಜಮೀನು ಮೀಸಲಿದ್ದು, ಅದನ್ನು ಬಳಸಿಕೊಂಡು ಕ್ರೀಡಾ ವಿವಿಯನ್ನು ಆದಷ್ಟು ಶೀಘ್ರ ಸ್ಥಾಪಿಸುವಂತೆ ಸಚಿವರಲ್ಲಿ ಕೋರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ