ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ರಾಷ್ಟ್ರಭಕ್ತರ ಪ್ರತಿಮೆಗಳನ್ನು ಧ್ವಂಸ ಮಾಡಿದ ಪುಂಡರ ವಿರುದ್ಧ ಕಠಿಣ ಕ್ರಮ: ಸಿಎಂ ಬೊಮ್ಮಾಯಿ

ಕಳೆದ ರಾತ್ರಿ ಬೆಳಗಾವಿಯಲ್ಲಿ ಪುಂಡರು ನಡೆಸಿದ ಪುಂಡಾಡಿಕೆಯನ್ನು ಸಂಪೂರ್ಣವಾಗಿ ಖಂಡಿಸುತ್ತೇನೆ, ಕಾನೂನು ಸುವ್ಯವಸ್ಥೆಗೆ ಯಾರೇ ಧಕ್ಕೆ ತಂದರೂ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಈಗಾಗಲೇ ಗೃಹ ಸಚಿವರಿಗೆ ಸೂಚನೆ ನೀಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡುವ ಮೂಲಕ ಈಗಾಗಲೇ 27 ಆರೋಪಿಗಳ ಬಂಧನವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿ: ಕಳೆದ ರಾತ್ರಿ ಬೆಳಗಾವಿಯಲ್ಲಿ ಪುಂಡರು ನಡೆಸಿದ ಪುಂಡಾಡಿಕೆಯನ್ನು ಸಂಪೂರ್ಣವಾಗಿ ಖಂಡಿಸುತ್ತೇನೆ, ಕಾನೂನು ಸುವ್ಯವಸ್ಥೆಗೆ ಯಾರೇ ಧಕ್ಕೆ ತಂದರೂ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಈಗಾಗಲೇ ಗೃಹ ಸಚಿವರಿಗೆ ಸೂಚನೆ ನೀಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡುವ ಮೂಲಕ ಈಗಾಗಲೇ 27 ಆರೋಪಿಗಳ ಬಂಧನವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೇವಲ ಬಂಧಿಸುವುದು ಮಾತ್ರವಲ್ಲ, ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ, ಈ ತರಹದ ಘಟನೆಗಳು ಕಲ್ಲು ತೂರಾಟ ನಡೆಸುವುದು, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯನ್ನುಂಟುಮಾಡುವುದು, ಸರ್ಕಾರದ ವಾಹನಗಳನ್ನು ಧ್ವಂಸ ಮಾಡುವುದು ಕಾನೂನುಬಾಹಿರ ಚಟುವಟಿಕೆ. ಈ ತರಹದ ಘಟನೆಗಳು ಪುನರಾವರ್ತಿಸದಂತೆ ದೀರ್ಘಾವಧಿ ಕ್ರಮ ಕೈಗೊಳ್ಳಲು ಪೊಲೀಸರಿದೆ ಸೂಚನೆ ನೀಡಿದ್ದೇನೆ ಎಂದರು.

ರಾಷ್ಟ್ರಭಕ್ತರ ಪ್ರತಿಮೆಗಳನ್ನು ಭಂಗ ಮಾಡುವ ಪ್ರವೃತ್ತಿ ದೇಶಭಕ್ತರ ಕೆಲಸವಲ್ಲ, ದೇಶಭಕ್ತರ ಪ್ರತಿಮೆಯನ್ನು ನಿರ್ಮಿಸಿ ಒಂದು ಕಡೆ ಪ್ರತಿಷ್ಠಾಪಿಸುವುದು ಅವರ ಮೇಲಿನ ಗೌರವಕ್ಕೆ, ಅವರ ಗೌರವವನ್ನು ಉಳಿಸಿಕೊಳ್ಳುವ ಕೆಲಸ ನಾವು ಮಾಡಬೇಕು, ದೇಶಭಕ್ತರ ಹೆಸರಿಗೆ ಮಸಿಬಳಿದು ಸಮಾಜದಲ್ಲಿ ಕ್ಷೋಭೆಯನ್ನುಂಟುಮಾಡುವುದು ಎಳ್ಳಷ್ಟೂ ಸರಿಯಲ್ಲ, ಕೆಲವೇ ಕೆಲವು ಪುಂಡರು ಉದ್ದೇಶಪೂರ್ವಕವಾಗಿ ಹೀಗೆ ಮಾಡುತ್ತಿದ್ದಾರೆ, ಮುಂದಿನ ದಿನಗಳಲ್ಲಿ ಅವರನ್ನು ಸದೆಬಡಿಯುವ ಕೆಲಸ ಮಾಡುತ್ತೇವೆ ಎಂದರು.

ಪುಂಡರು ಈ ರೀತಿಯ ದುಷ್ಕೃತ್ಯ ನಡೆಸುವುದಕ್ಕೆ ಹಲವಾರು ಕಾರಣಗಳಿವೆ.ಅಧಿವೇಶನ ಸಮಯದಲ್ಲಿ ಹೀಗೆ ಆಗುತ್ತಿದೆ. ಅವುಗಳನ್ನು ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT