ಗೃಹ ಸಚಿವ ಆರಗ ಜ್ಞಾನೇಂದ್ರ 
ರಾಜ್ಯ

ಬೆಳಗಾವಿಯಲ್ಲಿ ಪುಂಡರ ಅಟ್ಟಹಾಸ: ತಪ್ಪಿತಸ್ಥರಿಗೆ ಭಯ ಹುಟ್ಟಿಸುತ್ತೇವೆಂದ ಗೃಹ ಸಚಿವ

ಬೆಳಗಾವಿಯಲ್ಲಿ ಪುಂಡರ ಗಲಾಟೆ ವಿಚಾರ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಭಯ ಹುಟ್ಟಿಸುತ್ತೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶನಿವಾರ ಹೇಳಿದ್ದಾರೆ.

ಬೆಂಗಳೂರು: ಬೆಳಗಾವಿಯಲ್ಲಿ ಪುಂಡರ ಗಲಾಟೆ ವಿಚಾರ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಭಯ ಹುಟ್ಟಿಸುತ್ತೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶನಿವಾರ ಹೇಳಿದ್ದಾರೆ.

ಘಟನೆ ಕುರಿತು ಸುದ್ದಿಮಾಧ್ಯಮವೊಂದರ ಜೊತೆಗೆ ಮಾತನಾಡಿರುವ ಅವರು, ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೆ ನಮ್ಮ ಸರ್ಕಾರ ಬಿಡಲ್ಲ. ಅವರ ವಿರುದ್ಧ ಕಾನೂನು ಕ್ರಮಗಳ ಕೈಗೊಳ್ಳಲಾಗುತ್ತದೆ. ಬೆರಳೆಣಿಕೆಯಷ್ಟು ಜನರು ಮಾಡುತ್ತಿರುವ ಕೃತ್ಯವಿದು. ಇಂತಹ ಘಟನೆ ಮರುಕಳಿಸದಂತೆ ಕ್ರಮ ತೆಗೆದುಕೊಳ್ಳುತ್ತೇವೆಂದು ಹೇಳಿದ್ದಾರೆ.

ಇಂತಹ ಪುಂಡಾಟಗಳನ್ನು ಹತ್ತಿಕ್ಕುತ್ತೇವೆ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇವೆ. ತಪ್ಪಿತಸ್ಥರಿಗೆ ಈ ಬಾರಿ ಭಯ ಹುಟ್ಟಿಸುತ್ತೇವೆ. ಪೊಲೀಸರು ತೆಗೆದುಕೊಳ್ಳುವ ಕ್ರಮಗಳನ್ನು ಕಾದು ನೋಡಿ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ