ಸ್ಯಾಂಕಿ ಕೆರೆಯ ಹತ್ತಿರವಿರುವ ಶಿವಾಜಿ ಪ್ರತಿಮೆ 
ರಾಜ್ಯ

ಸದಾಶಿವನಗರ ಸ್ಯಾಂಕಿ ಕೆರೆ ಬಳಿಯಿರುವ ಶಿವಾಜಿ ಪುತ್ಥಳಿಗೆ ಮಸಿ ಬಳಿದ ಪ್ರಕರಣ: ಏಳು ಮಂದಿ ಬಂಧನ

ರಾಜಧಾನಿ ಬೆಂಗಳೂರಿನ ಸದಾಶಿವನಗರ ಬಳಿ ಶಿವಾಜಿ ಪುತ್ಥಳಿಗೆ ಕಪ್ಪು ಬಣ್ಣ ಬಳಿದ ಪ್ರಕರಣಕ್ಕೆ ಸಂಬಂಧಿಸಿ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ತಿಳಿಸಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸದಾಶಿವನಗರ ಬಳಿ ಶಿವಾಜಿ ಪುತ್ಥಳಿಗೆ ಕಪ್ಪು ಬಣ್ಣ ಬಳಿದ ಪ್ರಕರಣಕ್ಕೆ ಸಂಬಂಧಿಸಿ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರಿಗೆ ಈ ಮಾಹಿತಿ ನೀಡಿದ ಅವರು, ಮೊನ್ನೆ ಡಿಸೆಂಬರ್ 17ರಂದು ಸದಾಶಿವನಗರದ ಬಾಷ್ಯಂ ಸರ್ಕಲ್ ಹತ್ತಿರದ ಸ್ಯಾಂಕಿ ಕೆರೆಯ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಬಳಿಯಲಾಗಿತ್ತು. ಇದಾದ ಬಳಿಕ ಮರಾಠ ಅಸೋಸಿಯೇಷನ್ ನವರು ನೀಡಿದ್ದ ದೂರಿನ ಆಧಾರದ ಮೇಲೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಸ್ಥಳದಲ್ಲಿ ಸಿಕ್ಕಿದ ಕುರುಹುಗಳು ಮತ್ತು ತನಿಖೆಯ ಬಳಿಕ ನಿನ್ನೆ ಸಾಯಂಕಾಲ 5 ಮಂದಿಯನ್ನು ಹಾಗೂ ಇಂದು ಬೆಳಗ್ಗೆ ಇಬ್ಬರನ್ನು ಬಂಧಿಸಿದ್ದೇವೆ. ಒಟ್ಟಾರೆ ಈ ಕೃತ್ಯದಲ್ಲಿ ಭಾಗಿಯಾಗಿದ್ದ ಏಳು ಮಂದಿಯನ್ನು ಬಂಧಿಸಿದ್ದೇವೆ. ಅವರ ಬಳಿಯಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನೂ ಕೆಲವರನ್ನು ಬಂಧಿಸಬೇಕಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT