ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 222 ಹೊಸ ಪ್ರಕರಣ ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,02,649ಕ್ಕೆ ಏರಿಕೆಯಾಗಿದೆ.
286 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 29,57,256ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 7,074 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕಿನಿಂದ ಇಂದು ಇಬ್ಬರು ಮೃತಪಟ್ಟಿದ್ದು, ಮೃತರ ಒಟ್ಟು ಸಂಖ್ಯೆ 38,290ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 0.25ರಷ್ಟಿದ್ದು, ಮರಣ ಪ್ರಮಾಣ ಶೇ. 0.90 ರಷ್ಟಿದೆ. ಬೆಂಗಳೂರಿನಲ್ಲಿ 146 ಹೊಸ ಪ್ರಕರಣ ಪತ್ತೆಯಾಗಿದ್ದು, 147 ಸೋಂಕಿತರು ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.
ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ್, ಹಾವೇರಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.