ಪ್ರವೀಣ್ ಶೆಟ್ಟಿ 
ರಾಜ್ಯ

ಬೆಳಗಾವಿಯತ್ತ ಕನ್ನಡಪರ ಸಂಘಟನೆಗಳು: ಹಿರೇಬಾಗೇವಾಡಿಯಲ್ಲಿ ಪ್ರವೀಣ್ ಶೆಟ್ಟಿ ಪೊಲೀಸರ ವಶಕ್ಕೆ

ಬೆಂಗಳೂರು ಹಾಗೂ ರಾಜ್ಯದ ಮೂಲೆ ಮೂಲೆಯಿಂದ ಸಾವಿರಾರು ಕನ್ನಡ ಪರ ಸಂಘಟನೆಗಳ ಸದಸ್ಯರು ಬೆಳಗಾವಿಯತ್ತ ಆಗಮಿಸುತ್ತಿದ್ದಾರೆ. ಕರ್ನಾಟಕದ ಗಡಿಯೊಳಗೆ ನಾಡದ್ರೋಹಿ ಕೆಲಸ ಮಾಡುತ್ತಿರುವ ಎಂಇಎಸ್

ಹಿರೇಬಾಗೇವಾಡಿ/ಬೆಳಗಾವಿ: ಬೆಂಗಳೂರು ಹಾಗೂ ರಾಜ್ಯದ ಮೂಲೆ ಮೂಲೆಯಿಂದ ಸಾವಿರಾರು ಕನ್ನಡ ಪರ ಸಂಘಟನೆಗಳ ಸದಸ್ಯರು ಬೆಳಗಾವಿಯತ್ತ ಆಗಮಿಸುತ್ತಿದ್ದಾರೆ. ಕರ್ನಾಟಕದ ಗಡಿಯೊಳಗೆ ನಾಡದ್ರೋಹಿ ಕೆಲಸ ಮಾಡುತ್ತಿರುವ ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡಬೇಕೆಂದು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ.

ಈ ಮಧ್ಯೆ ಬೆಂಗಳೂರಿನಿಂದ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಆಗಮಿಸುತ್ತಿದ್ದ ಪ್ರವೀಣ್ ಶೆಟ್ಟಿ ಹಾಗೂ ಅವರ ಬಣದ ಕರವೇ ಸಂಘಟನೆಯ ಕಾರ್ಯಕರ್ತರನ್ನು ತಡೆಯಲಾಗಿದೆ. ಸುವರ್ಣ ವಿಧಾನಸೌಧದಿಂದ 10 ಕಿಲೋ ಮೀಟರ್ ದೂರದಲ್ಲಿರುವ ಹಿರೇಬಾಗೇವಾಡಿ ಟೋಲ್ ಬಳಿ ಕಾರ್ಯಕರ್ತರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಮಾತನಾಡಿದ ಪ್ರವೀಣ್ ಶೆಟ್ಟಿ, ನಾಡದ್ರೋಹಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಎಂಇಎಸ್ ಮುಖಂಡರಿಗೆ ಮಸಿ ಬಳಿದ ಕನ್ನಡಿಗರನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು. ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಶಾಸಕರು ಮಾತನಾಡಬೇಕು. ಇಲ್ಲದಿದ್ದರೆ ಅಂತಹ ಶಾಸಕರ ವಿರುದ್ಧ ಕನ್ನಡಪರ ಸಂಘಟನೆಗಳು ಧ್ವನಿ ಎತ್ತಬೇಕಾಗುತ್ತದೆ ಎಂದು ಎಚ್ಚರಿಗೆ ಕೊಟ್ಟರು

ನಾವು ಸರ್ಕಾರ, ಕನ್ನಡಿಗರ ಪರವಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಮ್ಮನ್ನು ಏಕೆ ವಶಕ್ಕೆ ಪಡೆಯುತ್ತಿದ್ದೀರಿ ಎಂದು ಪ್ರವೀಣ್ ಶೆಟ್ಟಿ ಅವರು ಪೊಲೀಸರನ್ನು ಪ್ರಶ್ನೆ ಮಾಡಿದರು.

ರಾಜ್ಯ ಸರ್ಕಾರ ಎಂಇಎಸ್ ವಿರುದ್ಧ ಸೂಕ್ತ ಕ್ರಮಕೈಗೊಳ್ಳದಿದ್ದರೆ ನಾಳೆ ಬೆಂಗಳೂರಿನಲ್ಲಿ ನಡೆಯುವ ಕನ್ನಡ ಪರ ಸಂಘಟನೆಗಳ ಸಭೆಯಲ್ಲಿ ಕಠಿಣ ನಿರ್ಧಾರ ಕೈಗೊಳ್ಳುತ್ತೇವೆ. ಕರ್ನಾಟಕ ಬಂದ್ ಘೋಷಣೆ ಮಾಡುವ ಬಗ್ಗೆ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಪ್ರವೀಣ್ ಶೆಟ್ಟಿ ತಿಳಿಸಿದರು.

ಹಿರೇಬಾಗೇವಾಡಿಯಲ್ಲಿ ಪ್ರವೀಣ್ ಶೆಟ್ಟಿ ಹಾಗೂ ಕನ್ನಡ ಪರ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು, ಸಾರಿಗೆ ಬಸ್ ನಲ್ಲಿ ಕರೆದುಕೊಂಡು ಹೋದರು. ಈ ವೇಳೆ, ಎಂಎಎಸ್ ಪುಂಡರ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT