ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಹೊಸ ವರ್ಷಾಚರಣೆಗೆ ನಿರ್ಬಂಧ: ಹೊಸ ಮಾರ್ಗಸೂಚಿ ಪ್ರಕಟಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಕೋವಿಡ್‌-19 ನಿಯಂತ್ರಣದ ಭಾಗವಾಗಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ಡಿಸೆಂಬರ್ 30 ರಿಂದ ಜನವರೆ 2 ರವರೆಗೂ ಕೆಲವು ನಿರ್ಬಂಧಗಳನ್ನು ವಿಧಿಸಿದ್ದು, ಹೊಸ ವರ್ಷಾಚರಣೆಗೆ ಅನ್ವಯವಾಗುವಂತೆ ಹೊಸ ಮಾರ್ಗಸೂಚಿಗಳನ್ನು ಮಂಗಳವಾರ ಬಿಡುಗಡೆ ಮಾಡಿದೆ.

ಬೆಳಗಾವಿ: ಕೋವಿಡ್‌-19 ನಿಯಂತ್ರಣದ ಭಾಗವಾಗಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ಡಿಸೆಂಬರ್ 30 ರಿಂದ ಜನವರೆ 2 ರವರೆಗೂ ಕೆಲವು ನಿರ್ಬಂಧಗಳನ್ನು ವಿಧಿಸಿದ್ದು, ಹೊಸ ವರ್ಷಾಚರಣೆಗೆ ಅನ್ವಯವಾಗುವಂತೆ ಹೊಸ ಮಾರ್ಗಸೂಚಿಗಳನ್ನು ಮಂಗಳವಾರ ಬಿಡುಗಡೆ ಮಾಡಿದೆ.

ಇಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹೊಸ ವರ್ಷಾಚರಣೆಗೆ ಬಹಿರಂಗ ಸಂತೋಷ ಕೂಟಗಳನ್ನು ಆಯೋಜನೆ ಮಾಡುವುದನ್ನು ನಿಷೇಧಗೊಳಿಸಲಾಗಿದೆ ಎಂದು ತಿಳಿಸಿದರು.

ಕೊವಿಡ್ ಬೆಳವಣಿಗೆಗಳನ್ನ ಗಮನದಲ್ಲಿಟ್ಟುಕೊಂಡು ಹೊಸವರ್ಷಾಚರಣೆಗೆ ವಿಶೇಷ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದ ಸಿಎಂ, ಹೊಸ ವರ್ಷಾಚರಣೆ ವೇಳೆ ಜನ ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗಿದೆ. ಆದರೆ ಚರ್ಚ್ ಗಳಲ್ಲಿ ಕ್ರಿಸ್ ಮಸ್ ಪ್ರಾರ್ಥನೆಗೆ ಯಾವುದೇ ನಿರ್ಬಂಧವಿಲ್ಲ ಎಂದರು.

ಬಹಿರಂಗ ಪಾರ್ಟಿಗೆ ಅವಕಾಶವಿರುವುದಿಲ್ಲ. ಡಿಸೆಂಬರ್ 30 ರಿಂದ ಜನವರಿ 2ರ ವರೆಗೂ ನಿಷೇದಾಜ್ಞೆ ಜಾರಿಯಲ್ಲಿರುತ್ತದೆ. ಯಾವುದೇ ಪಾರ್ಟಿಗಳನ್ನ ಮಾಡುವಂತಿಲ್ಲ. ಅಪಾರ್ಟ್ಮೆಂಟುಗಳಲ್ಲಿ ಜನರನ್ನ ಸೇರಿಸಿ ಪಾರ್ಟಿ ಮಾಡುವಂತಿಲ್ಲ. ಬಾರ್‌ ಅಂಡ್‌ ರೆಸ್ಟೋರೆಂಟ್‌ ಸಿಬ್ಬಂದಿಗೆ ಎರಡು ಡೋಸ್ ವ್ಯಾಕ್ಸಿನೇಷನ್ ಕಡ್ಡಾಯ. ದೊಡ್ಡ ಮಟ್ಟದಲ್ಲಿ ಪಾರ್ಟಿ ಆಯೋಜನೆ ಮಾಡುವಂತಿಲ್ಲ. ಕೋವಿಡ್ ನಿಯಮ ಪಾಲನೆ ಕಡ್ಡಾಯ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT