ಅಪಘಾತಕ್ಕೊಳಗಾದ ಕಾರು 
ರಾಜ್ಯ

ಹೀರೇಬಾಗೆವಾಡಿಯಲ್ಲಿ ಭೀಕರ ರಸ್ತೆ ಅಪಘಾತ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮೂವರ ದುರ್ಮರಣ, ಇಬ್ಬರಿಗೆ ಗಾಯ

ನಿಂತಿದ್ದ ಲಾರಿಗೆ ವೇಗವಾಗಿ ಬಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿ, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ದುರ್ಘಟನೆ ಸಂಭವಿಸಿದೆ.

ಬೆಳಗಾವಿ: ನಿಂತಿದ್ದ ಲಾರಿಗೆ ವೇಗವಾಗಿ ಬಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿ, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ದುರ್ಘಟನೆ ಸಂಭವಿಸಿದೆ.

ಮೃತರು ಧಾರವಾಡದಿಂದ ಬೆಳಗಾವಿಗೆ ಹೊರಟ್ಟಿದ್ದರು, ಯಲ್ಲಾಪುರದ ಚರ್ಚ್ ರಸ್ತೆ ನಿವಾಸಿ ಸೈಯ್ಯದ್ ಇಸ್ಮಾಯಿಲ್ ದಾವೂದ್ (64), ಬೆಳಗಾವಿಯ ಲಕ್ಷ್ಮೀಟೆಕ್ ಸೈನಿಕ ನಗರದ ನಿವಾಸಿ ಸುಶೀಲಾ ಡಿಕೋಸ್ತಾ (73), ಯಲ್ಲಾಪುರದ ಕಾಳಮ್ಮ ನಗರದ ನಿವಾಸಿ ವಾಸಿಂ ಹುಸೇನ್ ಖಾನ್ (35) ಮೃತರಾಗಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ಯಲ್ಲಾಪುರದ ಚರ್ಚ್ ರಸ್ತೆಯ ನಿವಾಸಿ ಜಾವೀದ್ ದಾವೂದ್ (41) ಮತ್ತು ಯಲ್ಲಾಪುರದ ಚರ್ಚ್ ರಸ್ತೆಯ ಮುಕ್ತಿಯಾರ್ ಯೂಸುಫ್ ಸೈಯ್ಯದ್ (46) ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ ಮೃತರು ಧಾರವಾಡದಿಂದ ಬೆಳಗಾವಿಗೆ ಕಾರಿನಲ್ಲಿ ತೆರಳುತ್ತಿದ್ದರು. ಆದರೆ ರಾಷ್ಟ್ರೀಯ ಹೆದ್ದಾರಿ-4ರ ಹಿರೇ ಬಾಗೇವಾಡಿ ಗ್ರಾಮದ ವೀರಪನ ಕೊಪ್ಪದ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಅವರು ಪ್ರಯಾಣಿಸುತ್ತಿದ್ದ ಕಾರು ವೇಗವಾಗಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಹಿರೇ ಬಾಗೇವಾಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT