ರಾಜ್ಯ

ಎರಡನೇ ಲಸಿಕಾ ಅಭಿಯಾನದಲ್ಲಿ ಬೆಂಗಳೂರು ನಗರ ಜಿಲ್ಲೆಗೆ ಮೊದಲ ಸ್ಥಾನ!

Srinivas Rao BV

ಬೆಂಗಳೂರು: ಎರಡನೇ ಸುತ್ತಿನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವಲ್ಲಿ ಬೆಂಗಳೂರು ನಗರ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.

ಬಿಬಿಎಂಪಿ ಹೊರತು ಪಡಿಸಿ 10,34,184 ಜನರಿಗೆ ಲಸಿಕೆ ನೀಡಿದ್ದು, ನೂರಕ್ಕೆ ನೂರರಷ್ಟು ಗುರಿ ಸಾಧಿಸಿದ ಜಿಲ್ಲೆಯಾಗಿದೆ ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಕಂದಾಯಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಂಗಳೂರು ನಗರ ಜಿಲ್ಲೆಯಲ್ಲಿ ಮೊದಲ ಸುತ್ತಿನಲ್ಲಿ 1326255 ಜನರಿಗೆ ಲಸಿಕೆ ಹಾಕಲಾಗಿದ್ದು, ಶೇ. 129 ಸಾಧನೆಯಾಗಿದೆ. ಇಡೀ ರಾಜ್ಯದಲ್ಲಿ ಗುರಿ ಮೀರಿ ಸಾಧನೆಗೈದ ಏಕೈಕ ಜಿಲ್ಲೆಯಾಗಿದೆ ಎಂದರು. ಆರೋಗ್ಯ ಇಲಾಖೆಯ ವೈದ್ಯರು-ಸಿಬ್ಬಂದಿ, ಜಿಲ್ಲಾ ಪಂಚಾಯತ್, ಆಶಾ ಕಾರ್ಯಕರ್ತರು, ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಮತ್ತಿತರ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಹಾಗೂ ಪ್ರತಿ ಗ್ರಾಮ ಪಂಚಾಯತಿಗಳ ಮನೆ ಮನೆಗೆ ಹೋಗಿ ಲಸಿಕೆ ಹಾಕಿಸಿದ ಕಾರಣ ಈ ಯಶಸ್ಸು ಸಾಧಿಸಲು ಸಾಧ್ಯವಾಗಿದೆಯೆಂದರು.

ಹೊಸ ವರ್ಷದ ಹೊಸ್ತಿಲಲ್ಲಿರುವ ನಾವುಗಳು ಸಂಭ್ರಮ ಆಚರಿಸಲು ಮುಂದಾಗಿದ್ದು, ಸಾರ್ವಜನಿಕರು ಅನಾವಶ್ಯಕವಾಗಿ ಗುಂಪು ಸೇರುವುದನ್ನು ಕಡಿಮೆ ಮಾಡಬೇಕು. ಎರಡು ಡೋಸ್ ಆಗಿದೆಯೆಂದು ಮೈಮರೆಯದೆ  ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅನಿತಾಲಕ್ಷ್ಮೀ, ಡಾ. ಶ್ರೀನಿವಾಸ, ಡಾ. ಮದಿನಿ, ಡಾ:ರಜನಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಲಿ ಕೋವಿಡ್ ವಾರಿಯರ್ಸ್‍ಗೆ ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು.

SCROLL FOR NEXT