ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಇಂದು 299 ಹೊಸ ಸೋಂಕು ಪ್ರಕರಣ, 2 ಸಾವು ವರದಿ

ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕದ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 299 ಹೊಸ ಸೋಂಕು ಪ್ರಕರಣಗಳು ಮತ್ತು 4 ಸಾವು ವರದಿಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕದ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 299 ಹೊಸ ಸೋಂಕು ಪ್ರಕರಣಗಳು ಮತ್ತು 4 ಸಾವು ವರದಿಯಾಗಿದೆ.

ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ಇಂದು ಒಟ್ಟು 299 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು,  ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 38301ಕ್ಕೆ ಏರಿಕೆಯಾಗಿದೆ. 

ರಾಜಧಾನಿ ಬೆಂಗಳೂರು ನಗರವೊಂದರಲ್ಲಿಯೇ 210 ಮಂದಿ ಸೋಂಕಿತರು ಪತ್ತೆಯಾಗಿದ್ದು, ಸೋಂಕಿನಿಂದ ನಗರದಲ್ಲಿ ಓರ್ವ ರೋಗಿ ಸಾವನ್ನಪ್ಪಿದ್ದಾರೆ. ಇನ್ನು ರಾಜ್ಯಾದ್ಯಂತ ಇಂದು 318 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ರಾಜ್ಯದಲ್ಲಿ ಗುಣಮುಖರ ಸಂಖ್ಯೆ 2958117ಕ್ಕೇರಿದೆ. ಪ್ರಸ್ತುತ ರಾಜ್ಯದಲ್ಲಿ 7117 ಸಕ್ರಿಯ ಪ್ರಕರಣಗಳಿವೆ.

ಅಂತೆಯೇ ಇಂದು ರಾಜ್ಯದಲ್ಲಿ 12 ಹೊಸ ಓಮಿಕ್ರಾನ್ ಸೋಂಕಿತರು ಪತ್ತೆಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಪಾಸಿಟಿವಿಟಿ ದರ ಶೇ.0.23ರಷ್ಟಿದ್ದು, ಮರಣ ಪ್ರಮಾಣ ಶೇ.0.66ರಷ್ಟಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ