ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್-19 ಏರಿಳಿತ: ರಾಜ್ಯದಲ್ಲಿಂದು 270 ಹೊಸ ಪ್ರಕರಣ ಪತ್ತೆ, 246 ಚೇತರಿಕೆ, 4 ಸಾವು

 ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ.ಕಳೆದ 24 ಗಂಟೆಗಳಲ್ಲಿ 270 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,04,239ಕ್ಕೆ ಏರಿಕೆಯಾಗಿದೆ. 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ.ಕಳೆದ 24 ಗಂಟೆಗಳಲ್ಲಿ 270 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,04,239ಕ್ಕೆ ಏರಿಕೆಯಾಗಿದೆ. 

246 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 29, 58, 630ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 7,271 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನ ಪ್ರಮಾಣ ಶೇ. 0.27 ರಷ್ಟಿದ್ದು, ಮರಣ ಪ್ರಮಾಣ ಶೇ. 1.48 ರಷ್ಟಿದೆ. ಬೆಂಗಳೂರಿನಲ್ಲಿ 152 ಪ್ರಕರಣ ಪತ್ತೆಯಾಗಿದ್ದು, 126 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ಬಾಗಲಕೋಟೆ, ಬಳ್ಳಾರಿ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT