ರಾಜ್ಯ

ಬಸವರಾಜ ಬೊಮ್ಮಾಯಿ ಒಬ್ಬ ಕೋಮುವಾದಿ ಮುಖ್ಯಮಂತ್ರಿ: ನಟ ಚೇತನ್‌

Shilpa D

ದಾವಣಗೆರೆ: ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ಸರ್ಕಾರದ ನಿರ್ಧಾರಕ್ಕೆ ವಿರೋಧಿಸುವ ಸ್ವಾಮೀಜಿಗಳು ಬಸವತತ್ವದವರು ಅಲ್ಲ. ಕೆಲ ಸ್ವಾಮೀಜಿಗಳು ಸಸ್ಯಹಾರಿಗಳಿಗೆ ಪ್ರತ್ಯೇಕ ಶಾಲೆಗಳನ್ನ ಕೇಳುತ್ತೀರುವುದು ಬೇಸರದ ವಿಚಾರವಾಗಿದೆ ಎಂದು ನಟ ಚೇತನ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊಟ್ಟೆ ತಿನ್ನುವವರ ಶಾಲೆ, ಮಟನ್ ತಿನ್ನುವರ ಶಾಲೆ ಹೀಗೆ ಪ್ರತ್ಯೇಕ ಶಾಲೆಗಳಾಗಿ ಭಾಗ ಮಾಡುವುದೇ ಸ್ವಾಮೀಜಿಗಳ ಉದ್ದೇಶವೇ?. ಅನುಭವ ಮಂಟಪದಲ್ಲಿ ಸಹ ಮಾಂಸಾಹಾರಿಗಳು ಇದ್ದರು, ಇದನ್ನು ಸ್ವಾಮೀಜಿಗಳು ಅರಿತುಕೊಳ್ಳಬೇಕು. ಇಡಿ ರಾಜ್ಯವೇ ದೇಶಕ್ಕೆ ಮಾದರಿ ಆಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದರು.

ದೇವದಾಸಿಗಳು ಅಸ್ಪೃಶ್ಯರು ಅತ್ಯಂತ ಹೀನಾಯ ಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದಾರೆ. ಇದನ್ನ ನೋಡುವಷ್ಟು ತಾಳ್ಮೆ ರಾಜಕಾರಣಿಗಳಿಗೆ ಇಲ್ಲ. ಬಸವರಾಜ ಬೊಮ್ಮಾಯಿ ಒಬ್ಬ ಕೋಮುವಾದಿ ಸಿಎಂ ಆಗಿದ್ದಾರೆ. ಯಾವ ಸಿಎಂ ಕೂಡ ಇಷ್ಟು ಕೋಮುವಾದಿಗಳು ಇರಲಿಲ್ಲ, ಎಲ್ಲರಿಗಿಂತ ಇವರು ಹೆಚ್ಚಿದ್ದಾರೆ. ಅವರ ತಂದೆ (ಎಸ್‌.ಆರ್‌. ಬೊಮ್ಮಾಯಿ) ಒಳ್ಳೆಯ ಪ್ರಗತಿಪರ ಮುಖ್ಯಮಂತ್ರಿ ಆಗಿದ್ದರು ಅಂತ ಹೇಳಿದ್ದಾರೆ.

ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಮಾತನಾಡಿದ ನಟ ಚೇತನ್‌ ಅವರು, ಇದೊಂದು ಸಂವಿಧಾನದ ವಿರೋಧ ನೀತಿಯಾಗಿದೆ. ಅಂಬೇಡ್ಕರ್, ಬಸವಣ್ಣನವರು, ಕೂಡ ಅವರಿಗೆ ಬೇಕಾದ ಧರ್ಮಸ್ಥಾಪನೆ ಮಾಡಿದ್ದಾರೆ. ಜನರು ಅವರಿಗೆ ಬೇಕಾದ ಧರ್ಮಕ್ಕೆ ಸೇರಬಹುದು ಎನ್ನುವುದು ಸಂವಿಧಾನದಲ್ಲಿದೆ. ಬಲವಂತವಾಗಿ ಮತಾಂತರ ಮಾಡಿದರೆ ಅದಕ್ಕೆ ಬೇಕಾದ್ರೆ ಕ್ರಮ ಕೈಗೊಳ್ಳಲಿ. ಜನರನ್ನ ಹೆದರಿಸಿ ಬೆದರಿಸಿ ಕಾಯ್ದೆ ತರುವುದು ಸರಿಯಲ್ಲ. ಅಲ್ಪಸಂಖ್ಯಾತರು, ಕ್ರಿಶ್ಚಿಯನ್‌ರ ಮೇಲೆ ದಬ್ಬಾಳಿಕೆ ಮಾಡಿ ಕಾಯ್ದೆ ತರುವಂತಾಗಿದೆ ಅಂತ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

SCROLL FOR NEXT