ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಉದ್ಘಾಟನೆ 
ರಾಜ್ಯ

ಹೊಸ ವರ್ಷಾಚರಣೆಗೆ ಕಠಿಣ ರೂಲ್ಸ್: ತಜ್ಞರ ಸಭೆಯ ನಂತರ ಮುಂದಿನ ನಿರ್ಧಾರ; ಹುಬ್ಬಳ್ಳಿಯಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕಠಿಣ ನಿಯಮ ಜಾರಿಗೆ ತರುವ ಸಂಬಂಧ ಮುಂದಿನ ವಾರದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿ: ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕಠಿಣ ನಿಯಮ ಜಾರಿಗೆ ತರುವ ಸಂಬಂಧ ಮುಂದಿನ ವಾರದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿ ಎಪಿಎಂಸಿಯಲ್ಲಿ   ಒಕ್ಕಲುತನ ಹುಟ್ಟುವಳಿ  ಮಾರಾಟ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸುವ ಸಂಬಂಧ ತಜ್ಞರ ಸಮಿತಿ ಜೊತೆ ಚರ್ಚಿಸಿದ ನಂತರ ಮುಂಗಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ದೇಶದಲ್ಲಿ ಓಮೈಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ರಾಜ್ಯ ಆತಂಕದಲ್ಲಿದೆ,  ವಿದೇಶಿ ಪ್ರಯಾಣಿಕರಿಗಿಂತ, ನೆರೆಯ ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡಿನಲ್ಲಿ ಓಮೈಕ್ರಾನ್ ಕೇಸ್ ಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ಭಾನುವಾರ ಬೆಂಗಳೂರು ತಲುಪಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸುತ್ತೇನೆ. ಬಳಿಕ ಇನ್ನಷ್ಟು ಕಠಿಣ ನಿಲುವು ಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಗುವುದು' ಎಂದು ಹೇಳಿದ್ದಾರೆ.

ಓಮೈಕ್ರಾನ್ ಸೋಂಕು ಹರಡುವುದನ್ನು ತಡೆಗಟ್ಟಲು ಈಗಾಗಲೇ ಕೆಲವು ಮಾರ್ಗಸೂಚಿಗಳನ್ನು ರಾಜ್ಯದಲ್ಲಿ ಜಾರಿ ಮಾಡಲಾಗಿದೆ. ಇದರ ಜೊತೆಗೆ ತಜ್ಞರೊಂದಿಗೆ ಚರ್ಚಿಸಿ ಇನ್ನೂ ಕೆಲವು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.

ಹೊಸ ವರ್ಷಾಚರಣೆಗೆ ಅವಕಾಶ ಇದೆಯೇ ಎಂದು ಕೇಳಲಾದ ಪ್ರಶ್ನೆಗೆ, 'ಈಗಾಗಲೇ ಹೊಸ ವರ್ಷಾಚರಣೆಗೆ ಸಂಬಂಧಿಸಿದಂತೆ ಕೆಲವು ಮಾರ್ಗಸೂಚಿ ಬಿಡುಡಗಡೆ ಮಾಡಲಾಗಿದೆ. ಭಾನುವಾರ ತಜ್ಞರ ಸಭೆಯ ಬಳಿಕ ಮುಂದಿನ ತೀರ್ಮಾನ ಮಾಡಲಾಗುವುದು' ಎಂದಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರಿಸಿದರು.

ಕಳೆದ ಕೆಲವು ದಿನಗಳಲ್ಲಿ ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳು ರಾತ್ರಿ ಕರ್ಫ್ಯೂ ಜಾರಿಗೊಳಿಸುತ್ತಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಮುಖ್ಯಮಂತ್ರಿ ಹೇಳಿದರು.  ಸದ್ಯ, ಕರ್ನಾಟಕದಲ್ಲಿ ಕಳೆದ ಒಂದು ತಿಂಗಳಲ್ಲಿ 32 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ.

ಹೀಗಾಗಲೇ ಅತಿ ಹೆಚ್ಚು ಜನರ ಗುಂಪು ಸೇರುವುದು, ಥಿಯೇಟರ್ ಗಳ ಆಕ್ಯುಪೆನ್ಸಿ ಮತ್ತು ಮದುವೆ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲಾಗಿದೆ.  ಕಳೆದ ಎರಡು ವರ್ಷಗಳಿಂದ ಹೋಟೆಲ್ ಉದ್ಯಮವು ಸಾಂಕ್ರಾಮಿಕ ರೋಗದಿಂದ ಭಾರೀ ಪೆಟ್ಟು ತಿಂದಿದೆ. ಈ ವರ್ಷ ಡಿಸೆಂಬರ್‌ನ ಆರಂಭದವರೆಗೆ ಎಲ್ಲವೂ ಸರಿಯಾಗಿತ್ತು,

ಆದರೆ ಈಗ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ನಾವು ಹೊಸ ನಿಯಮಗಳನ್ನು ಜಾರಿಗೊಳಿಸುವ ಸಾಧ್ಯತೆಯಿದೆ.  31 ರ ರಾತ್ರಿ ದೊಡ್ಡ ಪಾರ್ಟಿ ಗಳಿಗೆ ಅವಕಾಶವಿಲ್ಲ, ಸಣ್ಣ ಪಾರ್ಟಿಗಳು ಮತ್ತು ಒಳಾಂಗಣ ಕಾರ್ಯಕ್ಕಗಳಿಗೆ ಅನುಮತಿ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT