ಎಚ್.ಡಿ ಕುಮಾರಸ್ವಾಮಿ 
ರಾಜ್ಯ

ನಿಖಿಲ್ ನಿನಗೆ 'ರಾಜಕೀಯ' ಸಹವಾಸ ಬೇಡಪ್ಪ: ಮಾಜಿ ಸಿಎಂ ಕುಮಾರಸ್ವಾಮಿ ಮಗನಿಗೆ ಹೀಗೆ ಹೇಳಿದ್ದೇಕೆ?

ರಾಜಕೀಯಕ್ಕಿಂತಲೂ ಹೆಚ್ಚಾಗಿ, ಕನ್ನಡ ಚಿತ್ರರಂಗದಲ್ಲಿ ಕಲಾವಿದನಾಗಿ ನಿಖಿಲ್​ ಅವರು ಅನೇಕ ವರ್ಷಗಳು ಈ ವೃತ್ತಿಯಲ್ಲಿ ತೊಡಗಿಕೊಳ್ಳಲಿ. ಉತ್ತಮವಾದ ಕಲಾವಿದನಾಗುವ ಸಾಮರ್ಥ್ಯವನ್ನು ದೇವರು ಅವರಿಗೆ ಕೊಟ್ಟಿದ್ದಾನೆ .

ಬೆಂಗಳೂರು: ರಾಜಕೀಯಕ್ಕಿಂತಲೂ ಹೆಚ್ಚಾಗಿ, ಕನ್ನಡ ಚಿತ್ರರಂಗದಲ್ಲಿ ಕಲಾವಿದನಾಗಿ ನಿಖಿಲ್​ ಅವರು ಅನೇಕ ವರ್ಷಗಳು ಈ ವೃತ್ತಿಯಲ್ಲಿ ತೊಡಗಿಕೊಳ್ಳಲಿ. ಉತ್ತಮವಾದ ಕಲಾವಿದನಾಗುವ ಸಾಮರ್ಥ್ಯವನ್ನು ದೇವರು ಅವರಿಗೆ ಕೊಟ್ಟಿದ್ದಾನೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರನಲ್ಲಿ ಪುತ್ರ ನಿಖಿಲ್ ನಟನೆಯ ರೈಡರ್ ಸಿನಿಮಾ ವೀಕ್ಷಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮೂರನೇ ಸಿನಿಮಾದಲ್ಲಿ ನಿಖಿಲ್ ಅತ್ಯುತ್ತಮವಾಗಿ ಅಭಿನಯಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ನಟರ ಅವಶ್ಯಕತೆ ಇದೆ. ಅದನ್ನು ನಿಖಿಲ್​ ಪೂರೈಸಲಿ ಎಂದು ಸಲಹೆ ನೀಡಿದ್ದಾರೆ.

ರಾಜಕಾರಣದ ಹಿನ್ನೆಲೆಯಿಂದ ಸಿನಿಮಾ ಬಗ್ಗೆ ಹೆಚ್ಚು ಗಮನ ಇರಲಿಲ್ಲ. ಈ ಸಿನಿಮಾ ನೋಡಿದ ಬಳಿಕ ನನಗೆ ಅನಿಸಿದ್ದು ಏನೆಂದರೆ, ಅವರು ರಾಜಕಾರಣದಲ್ಲಿ ತೊಡಗಿಕೊಳ್ಳುವುದಕ್ಕಿಂತಲೂ ಸಿನಿಮಾಗಳಲ್ಲಿ ನಟಿಸುವ ಮೂಲಕ ಕನ್ನಡ ಭಾಷೆಗೆ ಪ್ರಾಮಾಣಿಕ ಸೇವೆ ಸಲ್ಲಿಸಲಿ ಅಂತ ಅನಿಸಿದೆ. ಈ ಸಂಬಂಧ ನಾನು ಅವರ ಜತೆ ಮಾತನಾಡುತ್ತೇನೆ. ಚಿತ್ರರಂಗದಲ್ಲಿ ಮುಂದುವರಿಯುವ ಮುಖಾಂತರ ಒಳ್ಳೆಯ ಕಲಾವಿದ ಆಗಲಿ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇತ್ತೀಚೆಗೆ ನಾವು ಪುನೀತ್​ ರಾಜ್​ಕುಮಾರ್ ಅವರನ್ನು ಕಳೆದುಕೊಂಡೆವು. ಅಂಥ ಅತ್ಯದ್ಭುತ ನಟ ನಮ್ಮ ಮುಂದಿಲ್ಲ. ಅವರ ರೀತಿಯ ಕಲಾವಿದರ ಅವಶ್ಯಕತೆ ಕನ್ನಡ ಚಿತ್ರರಂಗಕ್ಕೆ ಇದೆ. ಆ ನಿಟ್ಟಿನಲ್ಲಿ ನಿಖಿಲ್​ ಅವರು ಹೆಚ್ಚಿನ ಸಮಯವನ್ನು ಚಿತ್ರರಂಗಕ್ಕೆ ಮೀಸಲಿಡಬೇಕು ಅಂತ ನಾನು ಬಯಸುತ್ತೇನೆ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

SCROLL FOR NEXT