ತೇಜಸ್ವಿ ಸೂರ್ಯ 
ರಾಜ್ಯ

ಮುಸ್ಲಿಂ- ಕ್ರೈಸ್ತರನ್ನು ಆದಷ್ಟು ಬೇಗ ಹಿಂದೂ ಧರ್ಮಕ್ಕೆ ಕರೆತರಬೇಕು: ಉಡುಪಿಯಲ್ಲಿ ತೇಜಸ್ವಿ ಸೂರ್ಯ ಹೇಳಿಕೆ

ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಜನರಿಗೆ ಕರೆ ನೀಡಿದ್ದಾರೆ.

ಉಡುಪಿ: ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಜನರಿಗೆ ಕರೆ ನೀಡಿದ್ದಾರೆ.

ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಅದಮಾರು ಮಠದ ಪರ್ಯಾಯ ಮಂಗಲೋತ್ಸವದ ವಿಶ್ವಾರ್ಪಣಂ ನ 20ನೇ ದಿನ ಸಮಾರಂಭದಲ್ಲಿ ರಾಜಕಾರಣದಲ್ಲಿ ಯುವ ಪೀಳಿಗೆ ಪ್ರವೇಶ ಎಂಬ ವಿಷಯದಲ್ಲಿ ವಿಶೇಷ ಉಪನ್ಯಾಸ ನೀಡಿದರು.

ಮುಸ್ಲಿಮರನ್ನ, ಕ್ರೈಸ್ತರನ್ನು ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಹೇಳಿದ್ದಾರೆ. ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು. ಚೀನಾ, ಜಪಾನಿಗೆ ಮತಾಂತರಗೊಂಡವರನ್ನು ಭಾರತಕ್ಕೆ ತರಬೇಕು. ಟಿಪ್ಪು ಜಯಂತಿಯಂದೇ ನಾವು ಹಿಂದೂ ಧರ್ಮಕ್ಕೆ ಮರುಮತಾಂತರ ಮಾಡಬೇಕು ಎಂದು ಹೇಳಿದರು.

ಟಿಪ್ಪುವಿನ ಖಡ್ಗದ ಕಾರಣಕ್ಕೆ ಬಹಳ ಮತಾಂತರಗಳು ಆಗಿವೆ. ಅಸಾಧ್ಯ ಎಂಬುದು ಯಾವುದೂ ಇಲ್ಲ. ನಮ್ಮ ಮನೆ, ಅಕ್ಕ-ಪಕ್ಕದ ಗ್ರಾಮ, ಊರುಗಳಲ್ಲಿ ಘರ್ ವಾಪಸೀ ಮಾಡಬೇಕು.  ನಾವು ದೊಡ್ಡದಾಗಿ ಕನಸನ್ನು ಕಾಣಬೇಕು ಎಂದರು.

ಈ ದೇಶದಲ್ಲಿ ರಾಮಮಂದಿರವನ್ನು ಸ್ಥಾಪನೆ ಮಾಡಿದ್ದೇವೆ.  ಕಾಶ್ಮೀರದ 370 ಕಾಯ್ದೆಯನ್ನು ತೆಗೆದು ಹಾಕಿದ್ದೇವೆ. ಪಾಕಿಸ್ತಾನದ ಮುಸಲ್ಮಾನರನ್ನು ಹಿಂದೂಗಳಾಗಿ ಪರಿವರ್ತನೆ ಮಾಡಬೇಕು.  ಘರ್ ವಾಪಸೀಯನ್ನು ಆದ್ಯ ಕರ್ತವ್ಯದ ರೀತಿಯಲ್ಲಿ ನಾವು ಮಾಡಬೇಕಾಗಿದೆ.  ಅಖಂಡ ಭಾರತದ ಕಲ್ಪನೆಯಲ್ಲಿ ಪಾಕಿಸ್ತಾನವೂ ಇದೆ. ಮಠ ದೇವಸ್ಥಾನ ಇದರ ಮುಂದಾಳತ್ವ ವಹಿಸಬೇಕು ಎಂದು ಉಡುಪಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಕರೆ ನೀಡಿದರು.

ಭಾರತದಲ್ಲಿ ಶೇ. 80ರಷ್ಟಿರುವ ಹಿಂದುಗಳ ದೇವಾಲಯಗಳನ್ನು ಸರ್ಕಾರ ತನ್ನ ವಶದಲ್ಲಿಟ್ಟುಕೊಂಡಿವೆ, ಆದರೆ ಚರ್ಚ್, ಮಸೀದಿಗಳನ್ನು ಮಾತ್ರ ಆಯಾ ಧರ್ಮದವರಿಗೆ ನೀಡಿದೆ. ಅಂದರೆ ಇದು ಹಿಂದುಗಳಿಗೆ ಮಾಡುತ್ತಿರುವ ಅವಮಾನವಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT